ಬೆಂಗಳೂರು : ಇಂಗ್ಲೆಂಡಿನ ರಾಣಿ 2ನೇ ಎಲಿಜಬೆತ್ ನಿಧನರಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ ಸೆಪ್ಟೆಂಬರ್ 11 ರ ಇಂದು ಕರ್ನಾಟಕದಲ್ಲೂ ಶೋಕಾಚರಣೆಗೆ ರಾಜ್ಯ ಸರ್ಕಾರ ಆದೇಶಿಸಿದೆ.
ಬ್ರಿಟನ್ ರಾಣಿ 2ನೇ ಎಲಿಜಬೆತ್ ನಿಧನದ ಹಿನ್ನೆಲೆಯಲ್ಲಿ ಇಂದು ಯಾವುದೇ ಅಧಿಕೃತ ಮನೋರಂಜನಾ ಕಾರ್ಯಕ್ರಮ ಇರುವುದಿಲ್ಲ. ನಿಯಮಿತವಾಗಿ ಎಲ್ಲಾ ಸರ್ಕಾರಿ ಇಲಾಖೆಯ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲಾಗುವುದು ಎಂದು ರಾಜ್ಯ ಸರ್ಕಾರದ ಆದೇಶದಲ್ಲಿ ತಿಳಿಸಿದೆ
ರಾಣಿ 2ನೇ ಎಲಿಜಬೆತ್ 70 ವರ್ಷಗಳ ಆಳ್ವಿಕೆಯನ್ನು ಪೂರೈಸಿ ನಿಧನ ಹೊಂದಿದ ಬಳಿಕ ಇದೀಗ ಎಲಿಜಬೆತ್ ಅವರ ಹಿರಿಯ ಪುತ್ರ 3ನೇ ಚಾರ್ಲ್ಸ್ ಅವರನ್ನು ಅಧಿಕೃತವಾಗಿ ಬ್ರಿಟನ್ ರಾಜ ಎಂದು ಘೋಷಿಸಲಾಗಿದೆ.
BIGG NEWS : ಪ್ರವಾಹ ಪೀಡಿತ ಪ್ರದೇಶಗಳಲ್ಲಿ `ನರೇಗಾ ಯೋಜನೆ’ಯಡಿ ಪರಿಹಾರ ಕಾಮಗಾರಿ : ರಾಜ್ಯ ಸರ್ಕಾರ ಆದೇಶ