ಕೋಲ್ಕತ್ತಾ: ಜಾರಿ ನಿರ್ದೇಶನಾಲಯ (ED) ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಕೋಲ್ಕತ್ತಾದ ಉದ್ಯಮಿಯೊಬ್ಬರ ಮನೆಯಲ್ಲಿ 17 ಕೋಟಿ ರೂ.ಗಳನ್ನು ವಶಪಡಿಸಿಕೊಂಡಿದೆ. ಮನಿ ಲಾಂಡರಿಂಗ್ ವಿರೋಧಿ ಏಜೆನ್ಸಿ ಕೋಲ್ಕತ್ತಾದ ಗಾರ್ಡನ್ ರೀಚ್ ಪ್ರದೇಶ ಸೇರಿದಂತೆ ಆರು ಸ್ಥಳಗಳ ಮೇಲೆ ನಿನ್ನೆ ಇಡಿ ದಾಳಿ ನಡೆಸಿತ್ತು.
ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಕೋಲ್ಕತ್ತಾ ಮೂಲದ ಮೊಬೈಲ್ ಗೇಮಿಂಗ್ ಆ್ಯಪ್ ಕಂಪನಿಯೊಂದರ ಪ್ರವರ್ತಕರ ಉದ್ಯಮಿ ಅಮೀರ್ ಖಾನ್ ನಿವಾಸದ ಮೇಲೆ ಶನಿವಾರ ಬೆಳಗ್ಗೆ ದಾಳಿ ನಡೆದಿದೆ. ಈ ವೇಳೆ 17.32 ಕೋಟಿ ರೂ.ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಹಣದ ಎಣಿಕೆ ಭಾನುವಾರ ಬೆಳಗ್ಗೆ ಮುಕ್ತಾಯಗೊಂಡಿದೆ ಎಂದು ಮೂಲಗಳು ತಿಳಿಸಿವೆ.
#WATCH | Kolkata, WB: Stacks of cash amounting to several crores have been recovered from the residence of businessman Nisar Khan during ED’s raid ongoing for several hours pic.twitter.com/o2qXzNSmDR
— ANI (@ANI) September 10, 2022
“ಇ-ನಗ್ಗೆಟ್ಸ್” ಎಂಬ ಗೇಮಿಂಗ್ ಅಪ್ಲಿಕೇಶನ್ ಅನ್ನು ಆರೋಪಿ ಅಮೀರ್ ಖಾನ್ ಪ್ರಚಾರ ಮಾಡಿದ್ದಾರೆ ಎಂದು ತನಿಖಾ ಸಂಸ್ಥೆ ಹೇಳಿಕೆಯಲ್ಲಿ ತಿಳಿಸಿದೆ.
ಫೆಡರಲ್ ಬ್ಯಾಂಕ್ ಅಧಿಕಾರಿಗಳು ಕೋಲ್ಕತಾ ಪೊಲೀಸರಿಗೆ ನೀಡಿದ್ದ ದೂರಿನಲ್ಲಿ ಗೇಮಿಂಗ್ ಆ್ಯಪ್ಗಳ ಖಾತೆಯಲ್ಲಿನ ವ್ಯವಹಾರದಲ್ಲಿ ಸಾಕಷ್ಟು ಗೋಲ್ಮಾಲ್ ನಡೆದಿದೆ ಎಂದಿದ್ದರು. ಈ ಸಂಬಂಧ ಫೆಬ್ರವರಿ 2021 ರಲ್ಲಿ ಕಂಪನಿ ಮತ್ತು ಅದರ ಪ್ರವರ್ತಕರ ವಿರುದ್ಧ ಕೋಲ್ಕತ್ತಾ ಪೊಲೀಸರು ಎಫ್ಐಆರ್ ದಾಖಲಿಸಿದ್ದರು.
ಇಡಿ ದಾಳಿಯ ಸಮಯದಲ್ಲಿ ಬ್ಯಾಂಕ್ ಅಧಿಕಾರಿಗಳಳು ಸೇರಿದಂತೆ ಕಾನೂನು ಮತ್ತು ಸುವ್ಯವಸ್ಥೆಯನ್ನು ಖಚಿತಪಡಿಸಿಕೊಳ್ಳಲು ಏಜೆನ್ಸಿಯ ಅಧಿಕಾರಿಗಳು ಕೇಂದ್ರ ಪಡೆಗಳ ಸಿಬ್ಬಂದಿಗಳೊಂದಿಗೆ ಇದ್ದರು.
BREAKING NEWS : ಬೆಳಗಾವಿಯಲ್ಲಿ ಗಣೇಶ ವಿಸರ್ಜನೆ ವೇಳೆ ಚಾಕುವಿನಿಂದ ಇರಿದು ಯುವಕನ ಕೊಲೆ
BIG NEWS : ಇಂದು ಭೂಮಿಯತ್ತ ಧಾವಿಸುತ್ತಿದೆ ಬೃಹತ್ ʻಕ್ಷುದ್ರಗ್ರಹʼ… ಈ ಬಗ್ಗೆ ನಾಸಾ ಹೇಳಿದ್ದೇನು?