ಬೆಂಗಳೂರು : ಕಾಲುವೆ ಒತ್ತುವರಿ ಜಾಗ ತೆರವುಗೊಳಿಸುವಂತೆ ಬೆಂಗಳೂರಿನ ರೈನ್ಬೋ ಡ್ರೈವ್ ಲೇಔಟ್ ವಿಲ್ಲಾಗಳಿಗೆ ಬೆಂಗಳೂರು ಪೂರ್ವ ತಹಶೀಲ್ದಾರ್ ನೋಟಿಸ್ ಜಾರಿ ಮಾಡಿದ್ದಾರೆ.
ರೈನ್ಬೋ ಡ್ರೈವ್ ಲೇಔಟ್ನಲ್ಲಿ ಜಿಲ್ಲಾಡಳಿತ ಸರ್ವೆ ನಡೆಸಿದ್ದು, ಕಾಲುವೆ ಒತ್ತುವರಿ ಮಾಡಿ ವಿಲ್ಲಾಗಳನ್ನ ನಿರ್ಮಿಸಿರುವುದು ಬಹಿರಂಗವಾಗಿದೆ.ಹೀಗಾಗಿ ಒತ್ತುವರಿ ಜಾಗವನ್ನು ತೆರವು ಮಾಡದಿದ್ರೆ ನಾವೇ ಮಾಡುತ್ತೇವೆ. ತೆರವು ಕಾರ್ಯಾಚರಣೆ ವೆಚ್ಚ ನೀವೇ ಭರಿಸಬೇಕೆಂದು 15ಕ್ಕೂ ಹೆಚ್ಚು ವಿಲ್ಲಾಗಳಿಗೆ ತಹಶೀಲ್ದಾರ್ ನೋಟಿಸ್ ಜಾರಿಗೊಳಿಸಿದ್ದಾರೆ.