ಮಂಗಳೂರು: ಹಿಂದೂ ಕಾರ್ಯಕರ್ತನಿಗೆ ಜೀವ ಬೆದರಿಕೆ ಪ್ರಕರಣದ ಆರೋಪಕ್ಕೆ ಸಂಬಂಧಪಟ್ಟಂತೆ ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಯ ಸಹೋದರನನ್ನು ಅರೆಸ್ಟ್ ಮಾಡಲಾಗಿದೆ.
ಮಂಗಳೂರು: ಹಿಂದೂ ಸಂಘಟನೆ ಕಾರ್ಯಕರ್ತನಿಗೆ ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಬೆಳ್ಳಾರೆ ಠಾಣೆ ಪೋಲಿಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಬ್ದುಲ್ ಸಪ್ರಿತ್ ಬಂಧಿತ ಆರೋಪಿಯಾಗಿದ್ದು, ಈತ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಶಫೀಕ್ ಎಂಬಾತನ ಸಹೋದರನಾಗಿದ್ದಾನೆ. ಸಫ್ರಿಜ್ ಬೆಳ್ಳಾರೆಯಲ್ಲಿರುವ ದೇವಿ ಹೈಟ್ಸ್ ಲಾಡ್ಜಿನಲ್ಲಿ ಮ್ಯಾನೇಜರ್ ಆಗಿರುವ ಪ್ರಶಾಂತ ಪೂಂಜಾರಿಗೆ ಕರೆ ಮಡಿ ಅವಾಚ್ಯ ಶಬ್ದಗಳಿಂದ ಬೈಯ್ದು ಜೀವ ಬೆದರಿಕೆ ಮಾಡಿದ್ದಾನೆ ಎನ್ನಲಾಗಿದೆ.
ಇನ್ನೂ ಘಟನೆಗಳ ಬಗ್ಗೆ ಮಾಹಿತಿ ಪಡೆದ ರಾತ್ರಿ ಹಿಂದೂ ಸಂಘಟನೆಯ ಕಾರ್ಯಕರ್ತರು ಶನಿವಾರ ರಾತ್ರಿ ಬೆಳ್ಳಾರೆ ಠಾಣೆ ಮುಂದೆ ಆರೋಪಿ ಗೆ ಅಬ್ದುಲ್ ಸಪ್ರಿತ್ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದವು. ಕೂಡಲೇ ಕಾರ್ಯಕೈಗೊಂಡ ಯಾಲಯಕ್ಕೆ ಕಲಂ 504, 506 ಐಪಿಸಿ ಯಂತೆ ಪ್ರಕರಣ ದಾಖಲಿಸಿಕೊಳ್ಳಲು ಅನುಮತಿ ನೀಡುವಂತೆ ಕೋರಿಕೆ ಪತ್ರ ಸಲ್ಲಿಸಿದ್ದರು. ಅದರಂತೆ, ಯಾಲಯದ ಅನುಮತಿಯಂತೆ ಅಬ್ದುಲ್ ಸಪ್ರೀತ್ ಯಾನೆ ಅಬ್ದುಲ್ ಸಫ್ರಿಜ್ ವಿರುದ್ಧ ಪ್ರಕರಣ ದಾಖಲಿಸಿ, ಆರೋಪಿಯನ್ನು ಬಂಧನ ಮಾಡಲಾಗಿದೆ ಎಂದು ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷಿಕೇಶ್ ಭಗವಾನ್ ಸೋನಾವಾಣೆ ತಿಳಿಸಿದ್ದಾರೆ.