ಮಧ್ಯಪ್ರದೇಶ: ದ್ವಾರಕಾ-ಶಾರದಾ ಪೀಠದ ಶಂಕರಾಚಾರ್ಯ ಸ್ವಾಮಿ ಸ್ವರೂಪಾನಂದ ಸರಸ್ವತಿ ( Dwarka Peeth Shankaracharya Swami Swaroopanand Saraswati passed away ) ಅವರು ಭಾನುವಾರ ಮಧ್ಯಪ್ರದೇಶದ ನರಸಿಂಗಪುರದಲ್ಲಿ ನಿಧನರಾದರು. ಆ ದಾರ್ಶನಿಕನಿಗೆ 99 ವರ್ಷ ವಯಸ್ಸಾಗಿತ್ತು. ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಯುಪಿ ಸಿಎಂ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದಾರೆ.
ನರಸಿಂಗ್ ಪುರದ ಶ್ರೀಧಾಮ್ ಜೋತೇಶ್ವರ ಆಶ್ರಮದಲ್ಲಿ ಉನ್ನತ ಧಾರ್ಮಿಕ ನಾಯಕ ಕೊನೆಯುಸಿರೆಳೆದರು. ವರದಿಗಳ ಪ್ರಕಾರ, ಅವರು ಸಣ್ಣ ಹೃದಯಾಘಾತದಿಂದ ನಿಧನರಾದರು. ಮಠಾಧೀಶರ ಅಂತ್ಯಕ್ರಿಯೆ ಸೋಮವಾರ ನಡೆಯಲಿದೆ.
VIRAL NEWS: ಬೆಕ್ಕನ್ನು ಹುಲಿ ಮಾಡಿದ ಭೂಪ: ಮುಂದೆ ಪೋಲಿಸರಿಗೆ ಸಿಕ್ಕಿದ್ದೇ ರೋಚಕ
ಸ್ವಾಮಿ ಸ್ವರೂಪಾನಂದ ಸರಸ್ವತಿ ಅವರ ನಿಧನದಿಂದ ತೀವ್ರ ದುಃಖಿತನಾಗಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ( Prime Minister Narendra Modi ) ಹೇಳಿದರು. “ಈ ದುಃಖದ ಸಮಯದಲ್ಲಿ ಅವರ ಅನುಯಾಯಿಗಳಿಗೆ ನನ್ನ ಸಂತಾಪಗಳು. ಓಂ ಶಾಂತಿ!” ಎಂದು ಟ್ವಿಟ್ಟರ್ ನಲ್ಲಿ ತಿಳಿಸಿದ್ದಾರೆ.
द्वारका शारदा पीठ के शंकराचार्य स्वामी स्वरूपानंद सरस्वती जी के निधन से अत्यंत दुख हुआ है। शोक के इस समय में उनके अनुयायियों के प्रति मेरी संवेदनाएं। ओम शांति!
— Narendra Modi (@narendramodi) September 11, 2022
ಕೇಂದ್ರ ಗೃಹ ಸಚಿವ ಅಮಿತ್ ಶಾ ( Union home minister Amit Shah ) ಕೂಡ ತಮ್ಮ ದುಃಖವನ್ನು ವ್ಯಕ್ತಪಡಿಸಿದ್ದಾರೆ. ಮಠಾಧೀಶರ ನಿಧನವು ಧಾರ್ಮಿಕ ನಾಯಕರ ಸಮುದಾಯಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ( Uttar Pradesh chief minister Yogi Adityanath ) ಹೇಳಿದ್ದಾರೆ.
श्री द्वारका-शारदा पीठ व ज्योतिर्मठ पीठ के जगतगुरु शंकराचार्य श्रद्धेय स्वामी श्री स्वरूपानंद सरस्वती जी महाराज का ब्रह्मलीन होना संत समाज की अपूरणीय क्षति है।
प्रभु श्री राम दिवंगत पुण्यात्मा को अपने परमधाम में स्थान व शोकाकुल हिंदू समाज को यह दुःख सहने की शक्ति दें।
ॐ शांति!
— Yogi Adityanath (@myogiadityanath) September 11, 2022