ಬೆಂಗಳೂರು: ರಾಜ್ಯದ ಹಾಲು ಉತ್ಪಾದಕ ರೈತರ ( Milk producing farmer ) ನೆರವಾಗುವ ನಿಟ್ಟಿನ ಸರ್ಕಾರ ಮಹತ್ವದ ಹೆಜ್ಜೆಯನ್ನು ಇರಿಸೋದಕ್ಕೆ ಮುಂದಾಗಿದೆ. ಈ ನಿಟ್ಟಿನಲ್ಲಿ ಪ್ರತಿ ಲೀಟರ್ ಹಾಲಿನ ಖರೀದಿ ಬೆಲೆ ರೂ.3 ಹೆಚ್ಚಳಕ್ಕೆ ( Milk purchase price hiked ) ಮುಂದಾಗಿದೆ ಎನ್ನಲಾಗಿದೆ. ಶೀಘ್ರವೇ ಈ ದರ ಹೆಚ್ಚಳದ ಆದೇಶ ಹೊರ ಬೀಳೋ ನಿರೀಕ್ಷೆಯಿದ್ದು, ರೈತರಿಗೆ ಭರ್ಜರಿ ಗುಡ್ ನ್ಯೂಸ್ ನೀಡಲಿದೆ.
ಈ ಸಂಬಂಧ ಕಳೆದ ಶುಕ್ರವಾರದಂದು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದಂತ ಕೆ ಎಂಎಫ್ ವಾರ್ಷಿಕ ಸರ್ವ ಸದಸ್ಯರ ಸಭೆಯಲ್ಲಿ ಸರ್ವಾನುಮತದ ನಿರ್ಣಯವನ್ನು ಕೈಗೊಳ್ಳಲಾಗಿದೆ ಎನ್ನಲಾಗಿದೆ. ರೈತರ ಆರ್ಥಿಕಾಭಿವೃದ್ಧಿಯ ನಿಟ್ಟಿನಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ತಿಳಿದು ಬಂದಿದೆ.
ಅಂದಹಾಗೇ, ಕೆ ಎಂ ಎಫ್ ನ ಎಲ್ಲಾ 14 ಜಿಲ್ಲಾ ಹಾಲು ಒಕ್ಕೂಟಗಳು ಹಾಲಿನ ದರ ಹೆಚ್ಚಳ ಮಾಡುವ ಬಗ್ಗೆ ಒಲವು ತೋರಿದ್ದವು ಎನ್ನಲಾಗಿದೆ. ಅಲ್ಲದೇ ಕಳೆದ 8 ತಿಂಗಳಿನಿಂದ ಹಾಲಿನ ದರ ಹೆಚ್ಚಳದ ಒತ್ತಡವನ್ನು ಕೆ ಎಂ ಎಫ್ ಗೆ ಹಾಕಲಾಗುತ್ತಿದೆ ಎನ್ನಲಾಗಿದೆ. ಈ ಸಂಬಂಧ ಈಗಾಗಲೇ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕೂಡ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿದ್ದರೂ, ಸರ್ಕಾರ ಆ ಬಗ್ಗೆ ಸೂಕ್ತ ಸ್ಪಂದನೆ ನೀಡಿಲ್ಲ.