ಬೆಂಗಳೂರು : ಜೆಡಿಎಸ್ ತೊರೆದು ಬಿಜೆಪಿಯಿಂದ ವಿಧಾನಪರಿಷತ್ ಗೆ ಪುನರಾಯ್ಕೆಯಾಗಿರುವ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಮತ್ತೆ ಸಭಾಪತಿ ಸ್ಥಾನ ನೀಡುವ ಸಾಧ್ಯತೆ ಇದೆ.
ಜೆಡಿಎಸ್ ಸದಸ್ಯರಾಗಿದ್ದ ಬಸವರಾಜ ಹೊರಟ್ಟಿ ಅವರು ಸಭಾಪತಿ ಮತ್ತು ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿ, ಬಿಜೆಪಿ ಸೇರಿದ್ದರು. ಸಭಾಪತಿ ಸ್ಥಾನ ನೀಡುವಂತೆ ಷರತ್ತು ಹಾಕಿದ್ದು, ಇದಕ್ಕೆ ಬಿಜೆಪಿ ಕೂಡ ಒಪ್ಪಿಗೆ ನೀಡಿದೆ ಎನ್ನಲಾಗಿದೆ. ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಬಿಜೆಪಿ ಸದಸ್ಯರಾಗಿ ಆಯ್ಕೆಯಾಗಿರುವ ಬಸವರಾಜ ಹೊರಟ್ಟಿ ಅವರಿಗೆ ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಆಯ್ಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಪ್ರಸ್ತುತ ಹಂಗಾಮಿ ಸಭಾಪತಿ ಸ್ಥಾನದಲ್ಲಿರುವ ರಘುನಾಥ್ ರಾವ್ ಮಲ್ಹಾಪುರ ಅವರಿಗೆ ಬೇರೆ ಜವಾಬ್ದಾರಿ ವಹಿಸುವ ಸಾಧ್ಯತೆ ಇದೆ. ಹೀಗಾಗಿ ಬಿಜೆಪಿಗೆ ಪೂರ್ಣ ಬಹುಮತ ಇರುವುದರಿಂದ ಹೊರಟ್ಟಿ ಅವರನ್ನು ಮತ್ತೆ ಸಭಾಪತಿ ಸ್ಥಾನಕ್ಕೆ ಆಯ್ಕೆ ಮಾಡುವ ಸಾಧ್ಯತೆ ಇದೆ.
BIGG NEWS : ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ : ಸೆ. 19 ರಂದು ಸಿಎಂ ಮನೆ ಮುಂದೆ ಪ್ರತಿಭಟನೆ