ಕೊಪ್ಪಳ : ಪಿಎಸ್ ಐ ನೇಮಕಾತಿ ಹಗರಣಕ್ಕೆ ಮತ್ತೊಂದು ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಪಿಎಸ್ ಐ ಹುದ್ದೆಗಾಗಿ ಶಾಸಕರು 15 ಲಕ್ಷ ರೂ. ಪಡೆದುಕೊಂಡಿದ್ದಾರೆ ಎಂಬ ಆಡಿಯೋ ವೈರಲ್ ಬೆನ್ನಲ್ಲೇ ಶಾಸಕರು ಹಣ ವಾಪಸ್ ಕೊಟ್ಟಿದ್ದಾರೆ ಎನ್ನಲಾಗಿದೆ.
ಯುಪಿ ಆಸ್ಪತ್ರೆಯಲ್ಲಿ ಪವರ್ ಕಟ್: ಮೊಬೈಲ್ ಟಾರ್ಚ್ ಬಳಸಿ ಚಿಕಿತ್ಸೆ ನೀಡಿದ ವೈದ್ಯರು
ಪರಸಪ್ಪ ಮೇಗೂರು ಎಂಬುವರು ಪಿಎಸ್ ಐ ಹುದ್ದೆಗಾಗಿ ಶಾಸಕ ಬಸವರಾಜ ದಡೇಸಗೂರು ಅವರಿಗೆ 15 ಲಕ್ಷ ರೂ. ನೀಡಿರುವುದಾಗಿ ಹೇಳಿಕೊಂಡಿದ್ದ ಆಡಿಯೋ ವೈರಲ್ ಆಗಿತ್ತು. ಆಡಿಯೋ ವೈರಲ್ ಬೆನ್ನಲ್ಲೇ ಪರಸಪ್ಪಗೆ ಶಾಸಕರು 15 ಲಕ್ಷ ರೂ. ಹಣ ವಾಪಸ್ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.
ಕನಕಗಿರಿ ಬಿಜೆಪಿ ಶಾಸಕ ಬಸವರಾಜ ದಡೇಸಗೂರು ಅವರು ಪರಸಪ್ಪ ಎಂಬುವರಿಗೆ 15 ಲಕ್ಷ ರೂ. ಹಣ ಪಡೆದಿರುವ ಕುರಿತಂತೆ ಆಡಿಯೋದಲ್ಲಿ ಒಪ್ಪಿಕೊಂಡಿದ್ದರು. ಈ ಆಡಿಯೋ ವೈರಲ್ ಆಗಿತ್ತು. ಇದೀಗ ಶಾಸಕರ ಹಣ ವಾಪಸ್ ಮಾಡಿರುವ ಫೋಟೋ ವೈರಲ್ ಆಗುತ್ತಿದೆ. ಪಿಎಸ್ ಐ ನೌಕರರಿಗಾಗಿ ಪರಸಪ್ಪ ಮೇಗೂರು 15 ಲಕ್ಷ ರೂ. ನೀಡಿದ್ದ ಎನ್ನಲಾಗಿತ್ತು.