ಬೆಂಗಳೂರು: ನಗರದಲ್ಲಿ ಕಳೆದೆರೆಡು ದಿನಗಳಿಂದ ಮಳೆರಾಯ ಸ್ವಲ್ಪ ಬಿಡುವು ಕೊಟ್ಟಿದ್ದಾನೆ. ಕಳೆದ ವಾರದಲ್ಲಿ ಸುರಿದ ಮಳೆಗೆ ಇಡೀ ಬೆಂಗಳೂರೇ ನಲುಗಿ ಹೋಗಿತ್ತು. ಇದೀಗ ಮಳೆ ಕಡಿಮಾಯಾಗುತ್ತಿದ್ದಂತೆ ಬಿಬಿಎಂಪಿ ಅಧಿಕಾರಿಗಳು ಒತ್ತುವರಿ ತೆರವು ಕಾರ್ಯಾಚರಣೆ ಕೈಗೊಂಡಿದ್ದಾರೆ. ಈಗಾಗಲೇ ರಾಜಕಾಲುವೆ ಒತ್ತುವರಿ ಸ್ಥಳದಲ್ಲಿ ಮಾರ್ಕಿಂಗ್ ಕಾರ್ಯಾ ಆರಂಭವಾಗಿದೆ.
ಮಹದೇವಪುರದ ಬಸವನಗರದಲ್ಲಿನ ಗೋಪಾಲನ್ ಕಾಲೇಜ್ ಆಡಳಿತದಿಂದ ಒತ್ತುವರಿ ಮಾಡಲಾಗಿತ್ತು. ರಾಜಕಾಲುವೆ ಒತ್ತುವರಿ ಮಾಡಿಕೊಂಡು ಮೈದಾನ ನಿರ್ಮಾಣ ಮಾಡಲಾಗಿತ್ತು. ಇಲ್ಲಿ ಮಳೆ ಬಂದಾಗ ಮೈದಾನ ಬಳಿ ಜಾಗದಲ್ಲಿ ಪ್ರವಾಹ ಉಂಟಾಗುತ್ತಿತ್ತು. ಇದರಿಂದ ಅಕ್ಕಪಕ್ಕದಲ್ಲಿರುವ ಅಪಾರ್ಟ್ ಮೆಂಟ್ ಗಳಿಗೂ ನೀರು ನುಗ್ಗುತ್ತಿತ್ತು. ಹೀಗಾಗಿ ಬಿಬಿಎಂಪಿ ಅಧಿಕಾರಿಗಳು ಸದ್ಯ ಒತ್ತುವರಿ ಜಾಗದಲ್ಲಿ ಮಾರ್ಕಿಂಗ್ ಮಾಡುತ್ತಿದ್ದಾರೆ.
ಇನ್ನು ರಾಜಕಾಲುವೆ ನುಂಗಿ ಬಂಗಲೆ ಕಟ್ಟಿಕೊಂಡಿದ್ದರು. ಇದೀಗ ಮಳೆ ಕಡಿಮಾಯಾಗುತ್ತಿದಂತೆ ಬಿಬಿಎಂಪಿ ಶಾಕ್ ನೀಡಿದೆ. ವಿಲ್ಲಾ ನಿವಾಸಿಗಳಿಗೆ ಬಿಬಿಎಂಪಿ ಅಧಿಕಾರಿಗಳು ಬಿಗ್ ಶಾಕ್ ಕೊಟ್ಟಿದ್ದಾರೆ.
ಈಗಾಗಲೇ ಕೆಲವು ಕಡೆ ಒತ್ತುವರಿ ಕೆಲವು ಕಡೆ ಕಾರ್ಯಾಚರಣೆಯನ್ನು ಬಿಬಿಎಂಪಿ ಅಧಿಕಾರಿಗಳು ಮಾಡಿದ್ದಾರೆ.
ಇತ್ತ, ವಿಲ್ಲಾ ನಿವಾಸಿಗಳಿಗೆ ಮಳೆಯ ಕಾಟ ದಿಂದ ನಿವಾಸಿಗಳು ಮನೆಖಾಲಿ ಮಾಡದ್ದಾರೆ. ಇದೀಗ ಅಲ್ಲಿ ಖದೀಮರ ಕೈಚಳಕ ತೋರಿಸಿದ್ದಾರೆ. ಮನೆಯಲಿದ್ದ ಚಿನ್ನಾಭರಣಗಳನ್ನ ದೋಚಿ ಕಳ್ಳರು ಪರಾರಿಯಾಗುತ್ತಿದ್ದಾರೆ. ಇದರಿಂದ ನಿವಾಸಿಗಳಿಗೆ ಆತಂಕ ಮನೆ ಮಾಡಿದೆ.