ಬೆಂಗಳೂರು : ಬಿಬಿಎಂಪಿ ಅಧಿಕಾರಿಗಳು ಒತ್ತುವರಿ ಮಾರ್ಕಿಂಗ್ ಮಾಡುತ್ತಿರುವ ಬಗ್ಗೆ ಮಾತನಾಡಿ, ಯಾರೇ ರಾಜಕಾಲುವೆ ಒತ್ತುವರಿ ಮಾಡಿದ್ರೂ ತೆರವು ಮಾಡ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ
BREAKING NEWS: ರಾಜಕಾಲುವೆ ಒತ್ತುವರಿ ಸ್ಥಳದಲ್ಲಿ ಮಾರ್ಕಿಂಗ್ ಮಾಡ್ತಿರೋ BBMP ಅಧಿಕಾರಿಗಳು
ಕಳೆದೆರೆಡು ದಿನಗಳಿಂದ ಮಳೆರಾಯ ಸ್ವಲ್ಪ ಬಿಡುವು ಕೊಟ್ಟಿದ್ದಾನೆ. ಕಳೆದ ವಾರದಲ್ಲಿ ಸುರಿದ ಮಳೆಗೆ ಇಡೀ ಬೆಂಗಳೂರೇ ನಲುಗಿ ಹೋಗಿತ್ತು. ಇದೀಗ ಮಳೆ ಕಡಿಮಾಯಾಗುತ್ತಿದ್ದಂತೆ ಬಿಬಿಎಂಪಿ ಅಧಿಕಾರಿಗಳು ಒತ್ತುವರಿ ತೆರವು ಕಾರ್ಯಾಚರಣೆ ಕೈಗೊಂಡಿದ್ದಾರೆ.
ಮಹದೇವಪುರದ ಬಸವನಗರದಲ್ಲಿನ ಗೋಪಾಲನ್ ಕಾಲೇಜ್ ಆಡಳಿತದಿಂದ ಒತ್ತುವರಿ ಮಾಡಲಾಗಿತ್ತು. ರಾಜಕಾಲುವೆ ಒತ್ತುವರಿ ಮಾಡಿಕೊಂಡು ಮೈದಾನ ನಿರ್ಮಾಣ ಮಾಡಲಾಗಿತ್ತು. ಇಲ್ಲಿ ಮಳೆ ಬಂದಾಗ ಮೈದಾನ ಬಳಿ ಜಾಗದಲ್ಲಿ ಪ್ರವಾಹ ಉಂಟಾಗುತ್ತಿತ್ತು. ಇದರಿಂದ ಅಕ್ಕಪಕ್ಕದಲ್ಲಿರುವ ಅಪಾರ್ಟ್ ಮೆಂಟ್ ಗಳಿಗೂ ನೀರು ನುಗ್ಗುತ್ತಿತ್ತು. ಹೀಗಾಗಿ ಬಿಬಿಎಂಪಿ ಅಧಿಕಾರಿಗಳು ಸದ್ಯ ಒತ್ತುವರಿ ಜಾಗದಲ್ಲಿ ಮಾರ್ಕಿಂಗ್ ಮಾಡುತ್ತಿದ್ದಾರೆ.
BREAKING NEWS: ರಾಜಕಾಲುವೆ ಒತ್ತುವರಿ ಸ್ಥಳದಲ್ಲಿ ಮಾರ್ಕಿಂಗ್ ಮಾಡ್ತಿರೋ BBMP ಅಧಿಕಾರಿಗಳು
ರಾಜಕಾಲುವೆ ಒತ್ತುವರಿ ಮಾಡಿರೋದ್ರಿಂದ ರಸ್ತೆಯಲ್ಲಿ ಓಡಾಡುವವರು, ಜನಸಾಮಾನ್ಯರಿಗೂ ತೊಂದರೆಯಾಗಿದೆ. ಭಾರೀ ಮಳೆಯಿಂದಾಗಿ ಐಟಿ – ಬಿಟಿಯವರಿಗೂ ತೊಂದರೆಯಾಗಿದೆ.
ಕೋರ್ಟ್ ಕೂಡ ಒತ್ತುವರಿ ತೆರವಿಗೆ ಈಗಾಗಲೇ ಆದೇಶಿಸಿದೆ. ಒತ್ತುವರಿ ತೆರವು ಕಾರ್ಯಾಚರಣೆ ಆರಂಭವಾಗಿದೆ. ಅಧಿಕ ಮಳೆಯಿಂದ ಎಲ್ಲರಿಗೂ ತೊಂದರೆಯಾಗಿದೆ. ರಾಜಕಾಲುವೆ ಒತ್ತುವರಿ ಕಾರ್ಯಾಚರಣೆಯಿಂದ ಹಿಂದೆ ಸರಿಯಲ್ಲ. ಯಾರೇ ರಾಜಕಾಲುವೆ ಒತ್ತುವರಿ ಮಾಡಿದ್ರೂ ತೆರವು ಮಾಡ್ತೇವೆ ಎಂದು ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.
BREAKING NEWS: ರಾಜಕಾಲುವೆ ಒತ್ತುವರಿ ಸ್ಥಳದಲ್ಲಿ ಮಾರ್ಕಿಂಗ್ ಮಾಡ್ತಿರೋ BBMP ಅಧಿಕಾರಿಗಳು