ಶಿವಮೊಗ್ಗ : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮ, ಕರ್ನಾಟಕ ಅಲೆಮಾರಿ ಹಾಗೂ ಅರೆ ಅಲೆಮಾರಿ ಅಭಿವೃದ್ದಿ ನಿಗಮ ಹಾಗೂ ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ದಿ ನಿಗಮಗಳ ವ್ಯಾಪ್ತಿಗೆ ಒಳಪಡುವ ಹಿಂದುಳಿದ ವರ್ಗಗಳ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಗಂಗಾ ಕಲ್ಯಾಣ ನೀರಾವರಿ ಯೋಜನೆಯಡಿ ಸೌಲಭ್ಯ ಒದಗಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತರು ಸೇವಾಸಿಂಧು ಪೋರ್ಟಲ್ ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ಲೈನ್ನಲ್ಲಿ ಅಕ್ಟೋಬರ್ 20 ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು.
ಮೇಲ್ಕಂಡ ನಿಗಮಗಳ ವ್ಯಾಪ್ತಿಗೆ ಒಳಪಡುವ ಜಾತಿ/ಸಮುದಾಯಗಳಿಗೆ ಸೇರಿದ, 18 ರಿಂದ 60 ವರ್ಷದೊಳಗಿನ ಸಣ್ಣ ಮತ್ತು ಅತಿ ಸಣ್ಣ ರೈತರಾಗಿದ್ದು ಯಾವುದೇ ಮೂಲದಿಂದ ನೀರಾವರಿ ಸೌಲಭ್ಯ ಹೊಂದಿರದ ಖುಷ್ಕಿ ಜಮೀನು ಹೊಂದಿರುವವರು ಈ ಸೌಲಭ್ಯ ಪಡೆಯಬಹುದು. ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ.98,000 ಹಾಗೂ ಪಟ್ಟಣ ಪ್ರದೇಶದವರಿಗೆ ರೂ.1,20,000 ಗಳ ಒಳಗಿರಬೇಕು. ಕನಿಷ್ಟ 01 ಎಕರೆ ಜಮೀನು ಹೊಂದಿರಬೇಕು. ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿದ್ದು ಆಧಾರ್ ಕಾರ್ಡ್ನಲ್ಲಿರುವಂತೆಯೇ ರೈತರ ಹೆಸರು, ಬ್ಯಾಂಕ್ ಖಾತೆಯ ಪುಸ್ತಕದಲ್ಲಿಯೂ ಇದ್ದು, ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರದಲ್ಲಿಯೂ ಆಧಾರ್ ಕಾರ್ಡ್ನಲ್ಲಿರುವಂತೆ ಹೆಸರು ಹೊಂದಾಣಿಕೆಯಾಗಬೇಕು.
ಆಪರೇಷನ್ ಒತ್ತುವರಿಗೆ ಸರ್ಕಾರ ಚುರುಕು: ಯಾರೇ ಆದ್ರು ಬಿಡಲ್ಲ, ದೊಡ್ಡವರಾದ್ರು ಸರಿಯೇ – ಸಿಎಂ ಬೊಮ್ಮಾಯಿ
ವೈಯಕ್ತಿಕ ಕೊಳವೆ ಬಾವಿ ಯೋಜನೆಯಡಿ ಘಟಕ ವೆಚ್ಚ ರೂ.2.50 ಲಕ್ಷ ಇದರಲ್ಲಿ ರೂ. 2.00 ಲಕ್ಷ ಸಹಾಯಧನ ಹಾಗೂ ರೂ.50 ಸಾವಿರ ನಿಗಮದಿಂದ ಶೇ.4 ರ ಬಡ್ಡಿದರದಲ್ಲಿ ನೀಡವ ಸಾಲದ ಮೊತ್ತವಾಗಿರುತ್ತದೆ.
ಹೆಚ್ಚಿನ ಮಾಹಿತಿಯನ್ನು ವೆಬ್ಸೈಟ್ www.dbcdc.karnataka.gov.in ಇಲ್ಲಿ ಹಾಗೂ ಸಹಾಯವಾಣಿ ಸಂಖ್ಯೆ 080-22374832, 9606066389 ಅಥವಾ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮ, ಭಾಗ್ಯ ನಿಲಯ, ಭಂಡಾರಿ ಗ್ಯಾಸ್ ಏಜೆನ್ಸಿ ಹತ್ತಿರ, 1ನೇ ತಿರುವು, ಗಾಂಧಿನಗರ, ಶಿವಮೊಗ್ಗ, ದೂ.ಸಂ: 08182-229634 ಇವರನ್ನು ಸಂಪರ್ಕಿಸಿ ಪಡೆಯಬಹುದು ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.