ಬೆಂಗಳೂರು: ಸೆಪ್ಟೆಂಬರ್ 14ರಂದು ಹಿಂದಿ ದಿವಸ ಆಚರಿಸಲು ರಾಜ್ಯ ಸರ್ಕಾರ ಹೊರಡಿರೋದು ಸರಿಯಲ್ಲ. ಹಿಂದಿ ದಿವಸನ್ನು ( Hindi Divas ) ಕರ್ನಾಟಕದಲ್ಲಿ ಒತ್ತಾಯಪೂರ್ವಕವಾಗಿ ಆಚರಿಸಲು ಬಿಡೋದಿಲ್ಲ. ನಮ್ಮ ರಾಜ್ಯದ ಜನತೆಯ ತೆರಿಗೆ ಹಣದಲ್ಲಿ ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರ ಹಿಂದಿ ದಿವಸ ಆಚರಣೆ ಮಾಡಬಾರದು ಎಂಬುದಾಗಿ ಸಿಎಂ ಬೊಮ್ಮಾಯಿಗೆ ಪತ್ರ ಬರೆದು, ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ( Farmer CM HD Kumaraswamy ) ಹೇಳಿದ್ದಾರೆ.
ಎಣ್ಣೆ ಪ್ರಿಯರೇ, ಈ ‘ಆಲ್ಕೋಹಾಲ್’ ಕುಡಿದ್ರೆ ‘ಹೃದಯ ಸಂಬಂಧಿ ಕಾಯಿಲೆ’ಗಳು ದೂರವಾಗುತ್ವಂತೆ ; ಅಧ್ಯಯನ
ಈ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಪತ್ರ ಬೆರದಿರುವಂತ ಅವರು, ಭಾರತವು ಸಾವಿರಾರು ಭಾಷೆ ಹಾಗೂ ಉಪ ಭಾಷೆಗಳನ್ನು ಒಳಗೊಂಡ 560ಕ್ಕೂ ಹೆಚ್ಚು ಸಂಸ್ಥಾನಗಳು ಒಪ್ಪಿ ಸೇರಿದ ಮತ್ತು ಸಾಮಾಜಿಕ, ಸಾಂಸ್ಕೃತಿಕವಾಗಿ ಭಿನ್ನ ಆಚರಣೆಯ ಒಂದು ಮಹಾನ್ ಒಕ್ಕೂಟವಾಗಿದೆ ಎಂದಿದ್ದಾರೆ.
ಸಾಲಸೌಲಭ್ಯ ನಿರೀಕ್ಷೆಯಲ್ಲಿದ್ದವರ ಗಮನಕ್ಕೆ: ಮರಾಠ ಅಭಿವೃದ್ಧಿ ನಿಗಮದಿಂದ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಈ ನಾಡಿನಲ್ಲಿ ಕೇವಲ ಒಂದು ಭಾಷೆಯನ್ನು ಮಾತ್ರವೇ ಮೆರೆಸುವುದು ನಿಜಕ್ಕೂ ಜನತೆಗೆ ಎಸಗುವಂತ ಅನ್ಯಾಯವಾಗಿದೆ. ಸೆಂಪ್ಟೆಂಬರ್ 14ರಂದು ಭಾರತ ಒಕ್ಕೂಟ ಸರ್ಕಾರದ ಪ್ರಾಯೋಜಿತ ಕಾರ್ಯಕ್ರಮವಾದ ಹಿಂದಿ ದಿವಸವನ್ನು ಕರ್ನಾಟಕದಲ್ಲಿ ಒತ್ತಾಯಪೂರ್ವಕವಾಗಿ ಆಚರಿಸುವುದು ರಾಜ್ಯ ಸರ್ಕಾರ ಕನ್ನಡಿಗರಿಗೆ ಮಾಡಿವು ಅನ್ಯಾಯವಾಗಿದೆ ಎಂದು ಕಿಡಿಕಾರಿದ್ದಾರೆ.
ರಾಜಕಾಲುವೆ ಒತ್ತುವರಿದಾರರಿಗೆ ಬಿಗ್ ಶಾಕ್: ಬಿಬಿಎಂಪಿಯಿಂದ ಮಹದೇವಪುರ ವಲಯದ 15 ಸ್ಥಳಗಳಲ್ಲಿ ತೆರವು
ಇನ್ನೂ ಕರ್ನಾಟಕ ಸರ್ಕಾರದ ವತಿಯಿಂದ, ನಮ್ಮ ರಾಜ್ಯದ ಜನತೆಯ ತೆರಿಗೆ ಹಣದಲ್ಲಿ ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರ ಹಿಂದಿ ದಿವಸ ಆಚರಣೆ ಮಾಡಬಾರದು ಎಂಬುದಾಗಿ ಸಿಎಂ ಬೊಮ್ಮಾಯಿಗೆ ಬರೆದಂತ ಪತ್ರದಲ್ಲಿ ಹೇಳಿದ್ದಾರೆ.