ಬೆಂಗಳೂರು : ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವೆಡೆ ಇಂದೂ ಮಳೆಯ ಆರ್ಭಟ ಮುಂದುವರೆಯಲಿದ್ದು, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
BREAKING NEWS : ಚಿತ್ರದುರ್ಗದಲ್ಲಿ ಸೇತುವೆ ದಾಟುವಾಗ ಘೋರ ದುರಂತ : ಹಳ್ಳದಲ್ಲಿ ಬೈಕ್ ಬಿದ್ದು ಇಬ್ಬರು ನೀರುಪಾಲು
ಕರವಾಳಿಯ ಉತ್ತಡ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಇಂದು ಆರೆಂಜ್ ಅಲರ್ಟ್ ನೀಡಿದ್ದು, ನಾಳೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟ, ಹಾವೇರಿ, ಗದಗ, ಧಾರವಾಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ವಿಜಯಪುರ, ಬೆಳಗಾವಿ, ಉತ್ತರ ಕನ್ನಡ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಎಡೆಬಿಡದೆ ಸುರಿಯುತ್ತಿರುವ ಮಳೆ ಮತ್ತು ಉಕ್ಕಿ ಹರಿಯುತ್ತಿರುವ ನದಿಗಳು ಮತ್ತು ತೊರೆಗಳು ಬಾಧಿತ ಜಿಲ್ಲೆಗಳಲ್ಲಿ ಎಕರೆಗಟ್ಟಲೆ ಬೆಳೆಗಳು, ಮನೆಗಳು ಮತ್ತು ರಸ್ತೆಗಳು ಹಾನಿಯಾಗಿವೆ.
ಶಿಶುಗಳಿಗೆ ನೀಡುವ ʻಆ್ಯಂಟಿಬಯಾಟಿಕ್ʼ ಮುಂದಿನ ದಿನಗಳಲ್ಲಿ ಕರುಳಿನ ಸಮಸ್ಯೆ ಉಂಟುಮಾಡಬಹುದು: ಅಧ್ಯಯನ