ಬೆಂಗಳೂರು : ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಪ್ರತಿ ಲೀಟರ್ ಹಾಲಿಗೆ 3 ರೂ. ಹೆಚ್ಚಳ ಮಾಡಲು ಕೆಎಂಎಫ್ ನಿರ್ಧರಿಸಿದೆ.
ಕೆಎಂಎಫ್ ಅಧ್ಯಕ್ಷರ ಸಭೆಯಲ್ಲಿ ಹಾಲಿನ ದರ ಏರಿಕೆ ಮಾಡಲು ನಿರ್ಧರಿಸಲಾಗಿದ್ದು, ಸರ್ಕಾರ ಅನುಮತಿ ಕೊಟ್ಟರೆ ಲೀಟರ್ ಹಾಲಿನ ದರ 3 ರೂ ಏರಿಸಲು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಕಳೆದ 8 ತಿಂಗಳಿನಿಂದ ಜಿಲ್ಲಾ ಹಾಲು ಒಕ್ಕೂಟಗಳು ಒತ್ತಡ ಹೇರುತ್ತಿರುವ ಹಿನ್ನೆಲೆಯಲ್ಲಿ ದರ ಏರಿಕೆ ಕುರಿತಂತೆ ಸರ್ಕಾರಕ್ಕೆ ಕೆಎಂಎಫ್ ಪ್ರಸ್ತಾವನೆ ಸಲ್ಲಿಸಿದೆ.
ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಬೆಲೆ ಏರಿಕೆಗೆ ಸಂಬಂಧಪಟ್ಟಂತೆ ಈಗಾಗಲೇ ತಮ್ಮ ಮೇಲೆ ರಾಜ್ಯದ ಜಿಲ್ಲಾ ಹಾಲು ಒಕ್ಕೂಟಗಳು ಹಾಕುತ್ತಿರುವ ಒತ್ತಡದ ಬಗ್ಗೆ ಸಿಎಂ ಬಳಿ ಚರ್ಚಿಸಿದ್ದಾರೆ.