ಗೋವಾ : ಗೋವಾದಲ್ಲಿ ಕಾಂಗ್ರೆಸ್ಗೆ ದೊಡ್ಡ ಶಾಕ್ ಎದುರಾಗಿದ್ದು 8 ಶಾಸಕರು ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದ್ದಾರೆ ಎಂದು ಕಾಂಗ್ರೆಸ್ನ ಮಾಜಿ ಶಾಸಕ ಮೈಕೆಲ್ ಲೋಬೊ ದೃಢಪಡಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.
ಸಿಎಂ ಪ್ರಮೋದ್ ಸಾವಂತ್ ಸಮ್ಮುಖದಲ್ಲಿ ದಿಗಂಬರ ಕಾಮತ್, ಮೈಕಲ್ ಲೋಬೋ, ದೇಲಿಲಾ ಲೋಬೋ, ರಾಜೇಶ್ ಫಲ್ದೇಸಾಯಿ, ಕೇದಾರ್ ನಾಯ್ಕ್, ಸಂಕಲ್ಪ್ ಅಮೋನ್ಕರ್, ಅಲೆಕ್ಸೋ ಸಿಕ್ವೇರಾ, ರುಡಾಲ್ಫ್ ಫರ್ನಾಂಡಿಸ್ ಸೇರಿದಂತೆ 8 ಕಾಂಗ್ರೆಸ್ ಶಾಸಕರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
Goa | 8 Congress MLAs including Digambar Kamat, Michael Lobo, Delilah Lobo, Rajesh Phaldesai, Kedar Naik, Sankalp Amonkar, Aleixo Sequeira & Rudolf Fernandes join BJP in presence of CM Pramod Sawant pic.twitter.com/uxp7YaZAUN
— ANI (@ANI) September 14, 2022
ಕಾಂಗ್ರೆಸ್ ನ ಎಲ್ಲಾ ಶಾಸಕರು ಪ್ರಧಾನಿ ಮೋದಿ ಅವರ ಕೈಗಳನ್ನು ಬಲಪಡಿಸಲು ಪ್ರಯತ್ನಿಸುತ್ತಾರೆ ಎಂದು ಲೋಬೋ ಬಿಜೆಪಿಗೆ ಸೇರುವ ಸಂದರ್ಭದಲ್ಲಿ ಹೇಳಿದರು.
Goa | 8 Congress MLAs join BJP
We have joined BJP to strengthen the hands of PM Modi & CM Pramod Sawant… 'Congress chhodo, BJP ko jodo': says former Congress MLA, Michael Lobo pic.twitter.com/LMSEAjqUXb
— ANI (@ANI) September 14, 2022
40 ಸದಸ್ಯ ಬಲದ ಗೋವಾ ವಿಧಾನಸಭೆಯಲ್ಲಿ ಕಾಂಗ್ರೆಸ್ ಈಗ ಕೇವಲ 3 ಶಾಸಕರನ್ನು ಹೊಂದಿದ್ದು, ಬಿಜೆಪಿ ಸಂಖ್ಯೆ 28 ಕ್ಕೆ ಏರಿದೆ. ಜುಲೈ 2019 ರಲ್ಲಿ ಇದೇ ರೀತಿಯ ಕ್ರಮದಲ್ಲಿ 10 ಕಾಂಗ್ರೆಸ್ ಶಾಸಕರು ಬಿಜೆಪಿಗೆ ಬದಲಾಗಿದ್ದರು.