ಶಿವಮೊಗ್ಗ: ಕಲಾಪದಲ್ಲಿ ಈಶ್ವರಪ್ಪ ಗೈರು ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದಲ್ಲಿ ಕೆ.ಎಸ್ ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.ನನಗೆ ಕಾಲು ನೋವು ಇದ್ದ ಕಾರಣಕ್ಕೆ ಸದನದಲ್ಲಿ ಭಾಗವಹಿಸಿಲ್ಲ. ಇದರಲ್ಲಿ ಬೇರೆ ವಿಶೇಷ ಏನಿಲ್ಲ ಎಂದು ಹೇಳಿದ್ದಾರೆ.
BIGG NEWS: ಕೆಪಿಸಿಸಿ ಅಧ್ಯಕ್ಷ ಚುನಾವಣೆ ವಿಚಾರ; 2 ವರ್ಷದಿಂದ ಶಕ್ತಿ ಮೀರಿ ಕೆಲಸ ಮಾಡಿದ್ದೀನಿ- ಡಿ.ಕೆ ಶಿವಕುಮಾರ್
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸದನದಲ್ಲಿ ನನಗೂ ಭಾಗವಹಿಸಬೇಕು ಎಂಬ ಆಸೆ ಇತ್ತು. ಆದರೆ ಕಾಲು ನೋವಿನಿಂದ ವೈದ್ಯರು ನನಗೆ ರೆಸ್ಟ್ ಮಾಡಬೇಕು ಎಂದು ಹೇಳಿದ್ದರು. ಅದಕ್ಕೆ ಸದನದಲ್ಲಿ ಭಾಗಿಯಾಗಲು ಸಾಧ್ಯವಾಗಿಲ್ಲ ಎಂದರು.
ಬಿಜೆಪಿ ಸರ್ಕಾರದ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಟೀಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಸಿದ್ದರಾಮಯ್ಯ ಸಮರ್ಥವಾಗಿ ಟೀಕೆ ಮಾಡ್ತಿದ್ದಾರೆ ಅನ್ನುವ ಅಂಶ ರಾಜ್ಯದ ಜನತೆಗೆ ಅನಿಸ್ತಿಲ್ಲ. ಗಂಟಲಿನಿಂದ ಜೋರಾಗಿ ವಾಗ್ದಾಳಿ ಮಾಡಿದ್ರೆ ಜನ ಒಪ್ಪುವುದಿಲ್ಲ. ನಾವು ಭ್ರಷ್ಟಾಚಾರ ಬಿಚ್ಚಿಡ್ತೀವಿ ಬಿಚ್ವಿಡ್ತೀವಿ ಅಂತಾ ಮೊದಲಿನಿಂದಲೂ ಹೇಳಿಕೊಂಡು ಬಂದರು.
BIGG NEWS: ಕೆಪಿಸಿಸಿ ಅಧ್ಯಕ್ಷ ಚುನಾವಣೆ ವಿಚಾರ; 2 ವರ್ಷದಿಂದ ಶಕ್ತಿ ಮೀರಿ ಕೆಲಸ ಮಾಡಿದ್ದೀನಿ- ಡಿ.ಕೆ ಶಿವಕುಮಾರ್
ಇವತ್ತಿನವರೆಗೂ ಭ್ರಷ್ಟಾಚಾರದ ಬಗ್ಗೆ ಒಂದೇ ಒಂದು ದಾಖಲೆ ಬಿಡುಗಡೆ ಮಾಡಿಲ್ಲ. 40% ಅಂತಾ ಕೆಂಪಣ್ಣ ಹೇಳಿದ್ರೂ, ಆದರೆ ಒಂದೇ ಒಂದು ದಾಖಲೆ ಬಿಡುಗಡೆ ಮಾಡಿಲ್ಲ. ಒಬ್ಬನೇ ಒಬ್ಬ ಸಚಿವನ ವಿರುದ್ದ ದಾಖಲೆ ಬಿಡುಗಡೆ ಮಾಡಿದ್ರೆ ಉತ್ತರ ಕೊಡ್ತೀವಿ. ಕೆಂಪಣ್ಣ ಕಾಂಗ್ರೆಸ್ (Congress) ಏಜೆಂಟ್ ಅನ್ನುವ ಅನುಮಾನ ರಾಜ್ಯದ ಜನರದ್ದಾಗಿದೆ ಎಂದು ಹೇಳಿದರು.