ಚಿತ್ರದುರ್ಗ: ಬಾಲಕಿಯರಿಗೆ ಲೈಂಗಿಕ ಕಿರುಕುಳ ಆರೋಪದಲ್ಲಿ ಪೋಕ್ಸೋ ಕೇಸ್ ( POSCO Case ) ದಾಖಲಾದ ನಂತ್ರ, ಮುರುಘಾ ಮಠದ ಡಾ.ಶಿವಮೂರ್ತಿ ಶಿವಶರಣರನ್ನು ಬಂಧಿಸಲಾಗಿದೆ. ಇದೀಗ ಜೈಲಿನಲ್ಲಿರುವಂತ ಅವರು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು, ಇಂದು ನ್ಯಾಯಾಲಯ ಸಂಜೆ 4.30ಕ್ಕೆ ಮುಂದೂಡಿಕೆ ಮಾಡಿದೆ. ಹೀಗಾಗಿ ಇಂದು ಸ್ವಾಮೀಜಿಗಳಿಗೆ ಜೈಲೋ ಅಥವಾ ಬೇಲೋ ಎಂಬುದು ಸಂಜೆ ನಿರ್ಧಾರವಾಗಲಿದ್ಯಾ ಎಂಬುದನ್ನು ಕಾದು ನೋಡಬೇಕಿದೆ.
ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶ್ರೀಗಳನ್ನು ( Murugha Sri ) ಬಂಧಿಸಲಾಗಿದೆ. ಅವರ ವಿಚಾರಣೆಯ ಬಳಿಕ ನ್ಯಾಯಾಂಗ ಬಂಧನದಲ್ಲಿ ಇದ್ದಾರೆ. ಇಂತಹ ಅವರು ಜಾಮೀನಿಗಾಗಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆಯನ್ನು ಚಿತ್ರದುರ್ಗದ 2ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯವು ನಡೆಸುತ್ತಿದೆ. ಈಗಾಗಲೇ ವಿಚಾರಣೆ ನಡೆಸಿದ್ದಂತ ಕೋರ್ಟ್, ಇಂದಿಗೆ ಜಾಮೀನು ಅರ್ಜಿಯನ್ನು ಮುಂದೂಡಿಕೆ ಮಾಡಲಾಗಿತ್ತು.
ಇಂದು ಜಾಮೀನು ಅರ್ಜಿ ಆರಂಭಿಸಿದಂತ ನ್ಯಾಯಾಲಯವು, ಸಂಜೆ 4.30ಕ್ಕೆ ಮತ್ತೆ ಮುಂದೂಡಿಕೆ ಮಾಡಿದೆ. ಸಂಜೆಯ ಬಳಿಕ ಮುರುಘಾ ಶ್ರೀಗಳು ಸಲ್ಲಿಸಿರುವಂತ ಜಾಮೀನು ಅರ್ಜಿಯ ಬಗ್ಗೆ ವಿಚಾರಣೆ ನಡೆಸಿ, ಯಾವ ನಿರ್ಧಾರವನ್ನು ಪ್ರಕಟಿಸಲಿದೆ ಎಂಬುದನ್ನು ಕಾದು ನೋಡಬೇಕಿದೆ.