ಮಂಗಳೂರು: ಮುಸ್ಲಿಂ ಯುವಕನೊಬ್ಬ ಸೂಪರ್ ಬಜಾರ್ ಮಳಿಗೆಯಲ್ಲಿ ಹಿಂದೂ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪ ಕೇಳಿ ಬಂದಿದ್ದು ಡಲೇ ಆರೋಪಿಯನ್ನು ಬಂಧಿಸಿ ಕಾನೂನು ಕ್ರಮ ಕೈಕೊಳ್ಳಬೇಕೆಂದು ಆಗ್ರಹಿಸಿ ಸ್ಥಳದಲ್ಲಿ ನೂರಾರು ಮಂದಿ ಹಿಂದೂ ಯುವಕರು ಜಮಾಯಿಸಿ ಅರೋಪಿ ಬಂಧನಕ್ಕೆ ಪಟ್ಟು ಹಿಡಿದ ಘಟನೆ ಪುತ್ತೂರಿನ ತಿಂಗಳಾಡಿಯಲ್ಲಿರುವ ಸೂಪರ್ ಬಜಾರ್ ಮಳಿಗೆ ಬಳಿ ನಡೆದಿದೆ.
ಸೆ.14ರಂದು ಸಂಜೆ ಸೂಪರ್ ಬಜಾರ್ ಮಳಿಗೆ ಬಂದಿದ್ದ ಹಿಂದೂ ಮಹಿಳೆ ಬಳಿ ಆರೋಪಿ ಬದ್ರುದ್ದೀನ್ ಯಾನೆ ಬದ್ರು ಎಂಬಾತ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ. ಈ ನಡುವೆ ತನಗೆ ಕಿರುಕುಳ ನೀಡುತ್ತಿದ್ದ ಹಾಗೇ ಮಹಿಳೆ ಕಿರುಚಿಕೊಂಡಿದ್ದು, ಕೂಡಲೇ ಜನ ಸೇರಿದ್ದರಿಂದ ಆರೋಪಿ ಓಡಿ ಹೋಗಿದ್ದಾನೆ ಎನ್ನಲಾಗಿದೆ. ಆರೋಪಿಯನ್ನು ಕೂಡಲೇ ಬಂಧಿಸಬೇಕು ಅಂತ ಹೇಳಿ ಘಟನ ಸ್ಥಳದಲ್ಲಿ ನೂರಾರು ಹಿಂದೂ ಸಂಘಟನೆಗಳ ಕಾರ್ಯಕರ್ತರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಈ ನಡುವೆ ಆರೋಪಿಯನ್ನು ಶೀಘ್ರವೇ ಬಂಧಿಸುವುದಾಗಿ ಪೊಲೀಸರು ಭರವಸೆ ನೀಡಿದ್ದು, ಘಟನ ಸ್ಥಳದಲ್ಲಿ ಉಂಟಾಗಿರುವ ಉದ್ವಿಗ್ನ ಹಿನ್ನಲೆಯಲ್ಲಿ, ಸೂಕ್ತ ಪೋಲಿಸ್ ಬಂದೋಬಸ್ತ್ ಹಮ್ಮಿಕೊಳ್ಳಲಾಗಿದೆ.