ಬಳ್ಳಾರಿ: ಜಿಲ್ಲೆಯ ವಿಮ್ಸ್ ಆಸ್ಪತ್ರೆಯಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದರಿಂದ ಐಸಿಯು ವಾರ್ಡ್ ನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದಾರೆ. ಕಳೆದ 24 ಗಂಟೆ ಆದರೂ ವಿದ್ಯುತ್ ಸಮಸ್ಯೆ ಸರಿಯಾಗಿಲ್ಲ. ಇದರಿಂದ ರೋಗಿಗಳು, ಸಂಬಂಧಿಕರು ವಿಮ್ಸ್ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
BIGG NEWS: ಲಖಿಂಪುರದಲ್ಲಿ ದಲಿತ ಸಹೋದರಿಯರ ಹತ್ಯೆ ಪ್ರಕರಣ: 6 ಮಂದಿ ಬಂಧನ| Dalit Sister’s Murder
ವಿದ್ಯುತ್ ಸರಬರಾಜು ಮಾಡುವ ಮೇನ್ ಕೇಬಲ್ ಬ್ಲಾಸ್ಟ್ ಆಗಿದೆ. ಈ ಪರಿಣಾಮವಾಗಿ ವಿಮ್ಸ್ ಆಸ್ಪತ್ರೆಯಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಹೀಗಾಗಿ ವಿಮ್ಸ್ ಆಸ್ಪತ್ರೆಯ ರೋಗಿಗಳು ಪರದಾಡುವಂತ ಸ್ಥಿತಿ ನಿರ್ಮಾಣವಾಗಿದೆ.ಇಬ್ಬರು ರೋಗಿಗಳು ಪ್ರಾಣ ಕಳೆದುಕೊಂಡಿದ್ದಾರೆ. ಇಷ್ಟೆಲ್ಲಾ ಆದ್ರೂ ಇನ್ನೂ ಕೂಡ ಸಮಸ್ಯೆ ಬಗೆಹರಿದಿಲ್ಲ. 24 ಗಂಟೆ ಕಳೆದರೂ ವಿದ್ಯುತ್ ಸಮಸ್ಯೆ ಸರಿಯಾಗಿಲ್ಲ. ಸದ್ಯ ಬಾಡಿಗೆ ಜನರೇಟರ್ ಮೂಲಕ ತಾತ್ಕಾಲಿಕ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ.