ಮೈಸೂರು: ಸಿಎಂ ಬಸವರಾಜ ಬೊಮ್ಮಾಯಿ ಸಮಗ್ರ ತನಿಖೆ ಹೇಳಿಕೆ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವ್ಯಂಗ್ಯವಾಡಿದ್ದಾರೆ. ಚಡ್ಡಿ-ಪ್ಯಾಂಟ್ , ಹಾಸಿಗೆ, ಮೊಟ್ಟೆ ಎಲ್ಲಾವನ್ನು ತನಿಖೆ ಮಾಡಲಿ, ನಾನು ಎಲ್ಲದಕ್ಕೂ ಸಿದ್ದನಾಗಿದ್ದೇನೆ ಎಂದರು.
ನಗರದಲ್ಲಿ ಮಾತನಾಡಿದ ಅವರು, ತನಿಖೆ ನಡೆಸಲು ಮೂರು ವರ್ಷ ಬೇಕಿತ್ತಾ..? ಎಂದು ಸಿಎಂಗೆ ಪ್ರಶ್ನೆ ಮಾಡಿದ್ದಾರೆ.ಇನ್ನು ವಿಧಾನ ಪರಿಷತ್ನಲ್ಲಿ ಇಂದು ಮತಾಂತರ ನಿಷೇಧ ವಿಧೇಯಕ ಮಂಡನೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದಲ್ಲಿ ಎಲ್ಲಿ ಮತಾಂತರ ನಡೆಯುತ್ತಿದೆ. ರಾಜ್ಯ ಸರ್ಕಾರಕ್ಕೆ ಡಿ.ಕೆ ಶಿವಕುಮಾರ್ ಪ್ರಶ್ನೆ ಮಾಡಿದ್ದಾರೆ. ಪ್ರಚಾರಕ್ಕಾಗಿ ಬಿಜೆಪಿ ಮಂಡನೆ ಮಾಡುತ್ತಿದೆ. ಇದರಿಂದ ಯಾವುದೇ ಪ್ರಯೋಜನೆ ಇಲ್ಲ. ಅಲ್ಪಸಂಖ್ಯಾತರಿಗೆ ಭಯ ಹುಟ್ಟಿಸಲು ಕಾಯ್ದೆ ಮಂಡಿಸಲಾಗುತ್ತಿದೆ. ದೇಶ, ರಾಜ್ಯ ವಿಭಜನೆ ಮಾಡಲು ಬಿಜೆಪಿ ಮುಂದಾಗಿದೆ. ಬಿಜೆಪಿ ಹೈಕಮಾಂಡ್ ಮೆಚ್ಚಿಸಲು ಮಂಡನೆ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.