ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ದುರಸ್ತಿ ಕಾರ್ಯಗಳನ್ನು ಕೈಗೊಳ್ಳಲಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಸೇರಿದಂತೆ ಹಲವೆಡೆ ಇಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯವಾಗಲಿದೆ ಎಂದು ಬೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ವಾರ ಸುರಿದ ಭಾರಿ ಮಳೆಯಿಂದ ಅವಾಂತರವಾಗಿತ್ತು. ಇದರಿಂದ ವಿವಿಧೆಡೆ ದುರಸ್ತಿ ಕಾಮಗಾರಿಗಳನ್ನು ನಿರ್ವಹಿಸಲು ಸಾಧ್ಯವಾಗಿರಲಿಲ್ಲ. ವಿಳಂಬಗೊಂಡಿರುವ ಕಾಮಗಾರಿಗಳನ್ನು ಇದೀಗ ಕೈಗೆತ್ತಿಕೊಳ್ಳುತ್ತಿರುವುದರಿಂದ ನಗರದಲ್ಲಿ ಇಡೀ ತಿಂಗಳು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಬಹುದು ಎಂದು ಬೆಸ್ಕಾಂ ಹೇಳಿದೆ.
ಬೆಂಗಳೂರಿನ ಓಬಜ್ಜಿಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಸವಳಂಗ ಸ್ಟೇಷನ್ನ ಎಲ್ಲ 11 ಕೆವಿ ಫೀಡರ್ಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗಲಿದೆ.