ಬೆಂಗಳೂರು : ಸರ್ಜಾಪುರದ ಯಮರೆ ಬಳಿ ಬಿಎಂಟಿಸಿ ಬಸ್ಸು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಳಕಿಗೆ ಬಂದಿದೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸರ್ಜಾಪುರದ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ದಿನದಿಂದ ದಿನಕ್ಕೆ ಸಿಲಿಕಾನ್ ಸಿಟಿಯಲ್ಲಿ ಬಿಎಂಟಿಸಿ ಬಸ್ಸುಗಳ ಅಪಘಾತಗಳು ಹೆಚ್ಚಾಗುತ್ತಿದ್ದು. ಕಿಲ್ಲರ್ ಬಿಎಂಟಿಸಿ ಬಸ್ ಎಂದರೇ ಪ್ರಸಿದ್ಧಿ ಪಡೆಯುವಂತಾಗಿದೆ. ಅಮಾಯಕರ ಜೀವಗಳು ಬಲಿಪಡೆಯುತ್ತಿದೆ. ಅದರಲ್ಲೂ ಚಾಲಕನ ನಿಯಂತ್ರಣ ತಪ್ಪಿ ಹಲವು ಅಪಘಾತಗಳು ಸಂಭವಿಸಿರುವುದು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿದೆ. ಬಿಎಂಟಿಸಿ ಅಧಿಕಾರಿಗಳು ಈ ಬಗ್ಗೆ ಹೆಚ್ಚಿನ ಗಮನಹರಿಸಬೇಕಾಗಿದೆ.