ಬೆಂಗಳೂರು: ವಿಧಾನಸಭೆಯಲ್ಲಿ ಆರೋಗ್ಯ ಸಚಿವ ಡಾ. ಸುಧಾಕರ್ ಆರೋಗ್ಯದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಪರವಾಗಿ ಬೇರೆ ಸಚಿವರು ಸದನದಲ್ಲಿ ಉತ್ತರಿಸಲಾಗುವುದು ಎಂದು ಬಿಜೆಪಿ ಹೇಳುತ್ತಿದ್ದಂತೆ ಕಲಾಪದಲ್ಲಿ ಗದ್ದಲ ಕೋಲಾಹಲ ಸೃಷ್ಟಿಯಾಗಿದೆ.
BIGG NEWS: ಈ ಬಾರಿ ದಸರಾ ಮಹೋತ್ಸವಕ್ಕೆ ಪ್ರಧಾನಿ?; ಅಂಬಾರಿಗೆ ಮೋದಿಯಿಂದ ಪುಷ್ಪಾರ್ಚನೆ ..!
ವಿಧಾನಸಭೆ ಕಲಾಪದಲ್ಲಿ ಬಹುತೇಕ ಸದಸ್ಯರು ಗೈರು ಆಗಿದ್ದಕ್ಕೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಲಾಪಕ್ಕೆ ಸರ್ಕಾರ ಸದಸ್ಯರು , ಸಚಿವರು ಕೂಡ ಗೈರಾಗಿದ್ದಕ್ಕೆ ನಾವು ಯಾರಿಂದ ಉತ್ತರ ಪಡೆಯಬೇಕು ಎಂದು ಸ್ಪೀಕರ್ ಗರಂ ಆಗಿದ್ದಾರೆ.
ಈ ವೇಳೆ ಆರೋಗ್ಯ ಸಚಿವ ಡಾ. ಸುಧಾಕರ್ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೀಗಾಗಿ ಸದನದಲ್ಲಿ ಅವರ ಅನುಪಸ್ಥಿತಿಯಲ್ಲಿ ಬೇರೆ ಸಚಿವರು ಉತ್ತರ ನೀಡುತ್ತಾರೆ ಎಂದು ಬಿಜೆಪಿ ಸದಸ್ಯರು ಹೇಳುತ್ತಿದ್ದಂತೆ ವಿಪಕ್ಷ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.