ನವದೆಹಲಿ: ರಜೌರಿ ಜಿಲ್ಲೆಯ ಭಿಂಬರ್ ಗಲ್ಲಿ ಬಳಿ ಹಲವಾರು ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಬಸ್ ಆಳವಾದ ಪ್ರಪಾತಕ್ಕೆ ಉರುಳಿದ ಪರಿಣಾಮ ನಾಲ್ವರು ಗುರುವಾರ ಸಾವನ್ನಪ್ಪಿದ್ದಾರೆ ಎಂದು ಮಂಜಕೋಟೆ ತಹಶೀಲ್ದಾರ್ ಜಾವೇದ್ ಚೌಧರಿ ತಿಳಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಜೀವಹಾನಿಗೆ ಸಂತಾಪ ಸೂಚಿಸಿದ್ದಾರೆ. “ರಜೌರಿಯಲ್ಲಿ ಸಂಭವಿಸಿದ ದುರಂತ ಅಪಘಾತದಿಂದ ಉಂಟಾದ ಜೀವಹಾನಿಯಿಂದ ದುಃಖಿತನಾಗಿದ್ದೇನೆ. ಈ ದುಃಖದ ಸಮಯದಲ್ಲಿ, ದುಃಖತಪ್ತ ಕುಟುಂಬಗಳೊಂದಿಗೆ ನನ್ನ ಆಲೋಚನೆಗಳು ಇವೆ. ಗಾಯಗೊಂಡವರು ಆದಷ್ಟು ಬೇಗ ಗುಣಮುಖರಾಗಲಿ. ಜಿಲ್ಲಾಡಳಿತವು ಸಾಧ್ಯವಿರುವ ಎಲ್ಲಾ ಸಹಾಯವನ್ನು ಒದಗಿಸುತ್ತಿದೆ” ಎಂದು ಲೆಫ್ಟಿನೆಂಟ್ ಗವರ್ನರ್ ಲ್ಜಿ ಕಚೇರಿ ತಿಳಿಸಿದೆ.
Jammu & Kashmir | Four people died after a bus carrying several passengers fell into a deep gorge near Bhimber Gali in Rajouri district today morning: Manjakote Tehsildar Javed Choudhary
— ANI (@ANI) September 15, 2022