ಬೆಂಗಳೂರು: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ( Minister Dr K Sudhakar ) ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರೋದಾಗಿ ತಿಳಿದು ಬಂದಿದೆ.
BREAKING: ಸಿಎಂ ಬೊಮ್ಮಾಯಿ ಮಾಧ್ಯಮ ಸಲಹೆಗಾರರಾಗಿ ಮೋಹನ್ ಕೃಷ್ಣ, ಸಂಯೋಚಕರಾಗಿ ಶಂಕರ್ ಪಾಗೋಜಿ ನೇಮಕ
ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ಅನಾರೋಗ್ಯ ಹಿನ್ನೆಲೆಯಲ್ಲಿ ವೈದ್ಯರು ಕೆಲ ದಿನಗಳ ವಿಶ್ರಾಂತಿಗೆ ಸೂಚಿಸಿದ್ದಾರೆ. ಈ ಕಾರಣಕ್ಕಾಗಿ ಸದನದ ಕಲಾಪದಲ್ಲಿ ಭಾಗವಹಿಸಲು ಸಾಧ್ಯವಾಗದೇ ಇರುವುದಕ್ಕೆ ವಿಷಾದವಿದೆ. ಆದಷ್ಟು ಶೀಘ್ರದಲ್ಲೇ ಕರ್ತವ್ಯಕ್ಕೆ ಹಾಜರಾಗುತ್ತೇನೆ. ನಿಮ್ಮ ಹಾರೈಕೆ ಇರಲಿ ಎಂದು ಹೇಳಿದ್ದಾರೆ.
ಅನಾರೋಗ್ಯ ಹಿನ್ನೆಲೆಯಲ್ಲಿ ವೈದ್ಯರು ಕೆಲ ದಿನಗಳ ವಿಶ್ರಾಂತಿಗೆ ಸೂಚಿಸಿದ್ದಾರೆ.
ಈ ಕಾರಣಕ್ಕಾಗಿ ಸದನದ ಕಲಾಪದಲ್ಲಿ ಭಾಗವಹಿಸಲು ಸಾಧ್ಯವಾಗದೇ ಇರುವುದಕ್ಕೆ ವಿಷಾದವಿದೆ.
ಆದಷ್ಟು ಶೀಘ್ರದಲ್ಲೇ ಕರ್ತವ್ಯಕ್ಕೆ ಹಾಜರಾಗುತ್ತೇನೆ. ನಿಮ್ಮ ಹಾರೈಕೆ ಇರಲಿ.— Dr Sudhakar K (@mla_sudhakar) September 14, 2022
ಅಂದಹಾಗೇ ಇಂದು ವಿಧಾನಸಭೆ ಪ್ರಶ್ನೋತ್ತರ ಕಲಾವದ ವೇಳೆಯಲ್ಲಿ ಸದಸ್ಯರ ಗೈರು ಹಾಜರಿಗೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಗರಂ ಆಗಿದ್ದರು. ಅಲ್ಲದೇ ಸದಸ್ಯರ ಗೈರಿಗೆ ಅಸಮಾಧಾನ ವ್ಯಕ್ತ ಪಡಿಸಿದ್ದರು. ಈ ಬೆನ್ನಲ್ಲೇ ಸಚಿವ ಸುಧಾಕರ್ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರೋದಾಗಿ ತಿಳಿದು ಬಂದಿದೆ.
ಅಂಗನವಾಡಿ ನೌಕರರ ಯಡವಟ್ಟು: ಶೌಚಾಲಯದಲ್ಲೇ ಬಂಧಿಯಾಗಿದ್ದ ಮಗು…ಮುಂದೆನಾಯ್ತು?