ಬೆಂಗಳೂರು: ಬಳ್ಳಾರಿಯ ಐಸಿಯುನಲ್ಲಿ ವಿದ್ಯುತ್ ಸ್ಥಗಿತಗೊಂಡ ಪರಿಣಾಮ, ಮೂವರು ರೋಗಿಗಳು ಸಾವನ್ನಪ್ಪಿದ್ದರು. ವಿಧಾನಸಭೆಯಲ್ಲಿಯೂ ಈ ವಿಚಾರ ಸದ್ದು ಮಾಡಿ, ವಿಪಕ್ಷ ನಾಯಕ ಸಿದ್ಧರಾಮಯ್ಯ ಮೃತ ಕುಟುಂಬಸ್ಥರಿಗೆ ಪರಿಹಾರಕ್ಕೆ ಒತ್ತಾಯಿಸಿದ್ದರು. ಈ ಬೆನ್ನಲ್ಲೇ ಸಿಎಂ ಬಸವರಾಜ ಬೊಮ್ಮಾಯಿಯವರು ಮೃತ ಮೂವರು ರೋಗಿಗಳ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.
ಇಂದು ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿನ ಐಸಿಯು ನಲ್ಲಿ ವಿದ್ಯುತ್ ಸ್ಥಗಿತಗೊಂಡಿದ್ದರಿಂದಾಗಿ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ಮೂವರು ರೋಗಿಗಳು ಆಕ್ಸಿಜನ್ ಕೊರತೆಯಿಂದಾಗಿ ಸಾವನ್ನಪ್ಪಿದ್ದರು. ಈ ಪ್ರಕರಣವನ್ನು ಗಂಭೀರವಾಗಿ ಸರ್ಕಾರ ಪರಿಗಣಿಸಿತ್ತು. ಈ ಬೆನ್ನಲ್ಲೇ ಸಿಎಂ ಬಸವರಾಜ ಬೊಮ್ಮಾಯಿಯವರು ಮೃತರ ಮೂವರು ರೋಗಿಗಳ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರವನ್ನು ಘೋಷಿಸಿದ್ದಾರೆ.
BIG NEWS: 65 ವರ್ಷಗಳ ಬಳಿಕ KSRTC ವೇತನ ಪಾವತಿ ವಿಧಾನ ಬದಲು: ಇನ್ಮುಂದೆ 1ನೇ ತಾರೀಕು ಚಾಲಕ, ನಿರ್ವಾಹಕರಿಗೂ ವೇತನ
ಇನ್ನೂ ಮತ್ತೊಂದೆಡೆ ವಿಮ್ಸ್ ಆಸ್ಪತ್ರೆಯ ಐಸಿಯು ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಉನ್ನತ ಮಟ್ಟದ ಸಮಿತಿ ರಚಿಸಿ ತನಿಖೆಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ಸಚಿವ ಸುಧಾಖರ್ ಟ್ವಿಟ್ ಮಾಡಿದ್ದು ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ಬುಧವಾರ ಸಂಭವಿಸಿದ ಘಟನೆ ಅತ್ಯಂತ ದುರದೃಷ್ಟಕರವಾಗಿದ್ದು, ಘಟನೆಯ ಬಗ್ಗೆ ಸೂಕ್ತ ಇಲಾಖಾ ತನಿಖೆ ನಡೆಸಿ ಆಡಳಿತಾತ್ಮಕ ಹಾಗೂ ತಾಂತ್ರಿಕ ಲೋಪದೋಷಗಳ ಬಗ್ಗೆ ವರದಿ ನೀಡಲು ಬಿಎಂಸಿಆರ್ ಐ ಸಂಸ್ಥೆಯ ಡಾ.ಸ್ಮಿತಾ ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿಯೊಂದನ್ನು ರಚಿಸಲಾಗಿದೆ ಅಂತ ತಿಳಿಸಿದ್ದಾರೆ.
ಬಳ್ಳಾರಿಯ ವಿಮ್ಸ್ ಐಸಿಯುನಲ್ಲಿ ಮೂವರು ದಾರುಣ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ಬಳ್ಳಾರಿ ವಿಮ್ಸ್ ಆಸ್ಪತ್ರೆಯ ದುರಂತವನ್ನು ಧ್ವನಿ ಎತ್ತಿದ್ದಾರೆ. ಈವೇಳೆ ಸಿದ್ದರಾಮಯ್ಯ, ಸಚಿವರಾದ ಮಾಧುಸ್ವಾಮಿ, ಶ್ರೀರಾಮುಲು ನಡುವೆ ವಾಕ್ಸಮರ ನಡೆದಿದೆ. ವಿಮ್ಸ್ ಘಟನೆ ಇದು ಸರ್ಕಾರಿ ಪ್ರಾಯೋಜಿತ ಕೊಲೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಈ ಹೇಳಿಕೆಗೆ ಸಚಿವ ಮಾಧುಸ್ವಾಮಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ರೋಗಿಗಳು ಸತ್ತಿರುವುದು ವಿದ್ಯುತ್ ಸಮಸ್ಯೆಯಿಂದ ಅಲ್ಲ; ಕರೆಂಟ್ ಹೋದ್ರು ಬಂದುವರೆ ಗಂಟೆ ಜನರೇಟರ್ ಬ್ಯಾಕ್ ಅಪ್ ಇದೆ ಎಂದು ವಾಗ್ವದ ನಡೆಸಿದ್ದಾರೆ.
ಶಿವಮೊಗ್ಗ: ಕೋವಿಡ್-19 ಬೂಸ್ಚರ್ ಡೋಸ್ ಪಡೆಯಿರಿ – DHO ಡಾ.ರಾಜೇಶ್ ಸುರಗಿಹಳ್ಳಿ ಮನವಿ
ಉತ್ತರಿಸಿದ ಸಚಿವ ಶ್ರೀರಾಮುಲು, ‘ಆಸ್ಪತ್ರೆಯಲ್ಲಿ ವಿದ್ಯುತ್ ಪೂರೈಕೆಗೆ ವ್ಯವಸ್ಥೆ ಮಾಡಲಾಗಿದೆ. ಐಸಿಯುನಲ್ಲಿ ಇದ್ದವರು ಕೇವಲ ವೆಂಟಿಲೇಟರ್ ವೈಫಲ್ಯದಿಂದಷ್ಟೇ ಮೃತಪಟ್ಟಿಲ್ಲ. ಅವರ ಸಾವಿಗೆ ಬೇರೆ ಕಾರಣಗಳು ಇವೆ. ರೋಗಿಗಳ ಆರೋಗ್ಯ ಸ್ಥಿತಿ ವ್ಯತ್ಯಯಗೊಂಡಿದ್ದರಿಂದ ಮೃತಪಟ್ಟರು. ನಾನು ಆಸ್ಪತ್ರೆಯ ಅಧೀಕ್ಷಕರೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ’ ಎಂದರು.
ಸದಸನದಲ್ಲಿ ಸಚಿವ ಮಾಧುಸ್ವಾಮಿ ಉತ್ತರ ನೀಡಿದ್ದಾರೆ, ತನಿಖೆ ನಡೆಸುವುದಾಗಿ ಸರ್ಕಾರ ಒಪ್ಪಿಕೊಂಡಿದೆ. ಆಸ್ಪತ್ರೆಯ ನಿರ್ಲಕ್ಷ್ಯ ಕಂಡು ಬಂದರೆ ಕ್ರಮ ಕೈಗೊಳ್ಳಲಿ. ನಮ್ಮ ತಪ್ಪಿದ್ರೆ ಪರಿಹಾರದ ಬಗ್ಗೆಯೂ ಪರಿಶೀಲನೆ ಮಾಡುತ್ತೇವೆ . ಈ ಬಗ್ಗೆ ಸ್ಪೀಕರ್ ಗಮನ ಹರಿಸಲಿ ಎಂದರು.
ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ಬುಧವಾರ ಸಂಭವಿಸಿದ ಘಟನೆ ಅತ್ಯಂತ ದುರದೃಷ್ಟಕರವಾಗಿದ್ದು, ಘಟನೆಯ ಬಗ್ಗೆ ಸೂಕ್ತ ಇಲಾಖಾ ತನಿಖೆ ನಡೆಸಿ ಆಡಳಿತಾತ್ಮಕ ಹಾಗೂ ತಾಂತ್ರಿಕ ಲೋಪದೋಷಗಳ ಬಗ್ಗೆ ವರದಿ ನೀಡಲು ಬಿಎಂಸಿಆರ್ ಐ ಸಂಸ್ಥೆಯ ಡಾ.ಸ್ಮಿತಾ ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿಯೊಂದನ್ನು ರಚಿಸಲಾಗಿದೆ.
1/2 pic.twitter.com/IpDT27HCcZ
— Dr Sudhakar K (@mla_sudhakar) September 15, 2022