ಬೆಂಗಳೂರು: ಕಳೆದ ಬೆಳಗಾವಿಯ ವಿಧಾನಸಭೆ ಕಲಾಪದ ಸಂದರ್ಭದಲ್ಲಿ ಧಾರ್ಮಿಕ ಸ್ವಾತಂತ್ರ್ಯ ಹಕ್ಕುಗಳ ಸಂರಕ್ಷಣಾ ತಿದ್ದುಪಡಿ ವಿಧೇಯಕ ಅಂಗೀಕರಿಸಲಾಗಿತ್ತು. ಈ ಕಾಯ್ದೆಯನ್ನು ಇದೀಗ ಬೆಂಗಳೂರಿನಲ್ಲಿ ನಡೆದಂತ ಸದನದಲ್ಲಿ ವಿಧಾನಪರಿಷತ್ ಕಲಾಪದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಮತಾಂತರ ನಿಷೇಧ ವಿಧೇಯಕವನ್ನು ವಿಪಕ್ಷಗಳ ವಿರೋಧದ ನಡುವೆಯ ಅಂಗೀಕರಿಸಲಾಯಿತು.
ವಿಧಾನಪರಿಷತ್ತಿನಲ್ಲಿ ಇಂದು ವಿಪಕ್ಷಗಳ ತೀವ್ರ ವಿರೋಧದ ನಡುವೆಯೂ ಧಾರ್ಮಿಕ ಸ್ವಾತಂತ್ರ್ಯ ಹಕ್ಕುಗಳ ಸಂರಕ್ಷಣಾ ತಿದ್ದುಪಡಿ ವಿಧೇಯಕವನ್ನು ಅಂಗೀಕರಿಸಲಾಗಿದೆ. ಈ ವೇಳೆಯಲ್ಲಿ ವಿಧಾನಪರಿಷತ್ತಿನ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ತಿದ್ದುಪಡಿ ವಿಧೇಯಕ ಪ್ರತಿಯನ್ನೇ ಹರಿದು ತೀವ್ರ ವಿರೋಧ ವ್ಯಕ್ತ ಪಡಿಸಿದರು.