ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ 15 ಸಾವಿರ ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿಗೆ ಸಂಯುಕ್ತ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗಿದ್ದು, ಆದಷ್ಟು ಶೀಘ್ರದಲ್ಲಿ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು.
ಅವರು ಇಂದು ವಿಧಾನಸಭಾ ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯರಾದ ಬಿ.ಶಿವಣ್ಣ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಗೌರವ ಸಂಭಾವನೆ ಪಾವತಿಸುವ ಮೂಲಕ ತಾತ್ಕಾಲಿಕವಾಗಿ 27 ಸಾವಿರ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಲಾಗಿದೆ ಎಂದರು.
ಸರ್ಕಾರಿ ಪ್ರೌಢಶಾಲೆಗಳ ವಿವಿಧ ವೃಂದಗಳ 25 ಸಾವಿರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಉದ್ದೇಶಿಸಲಾಗಿದೆ. ರಾಜ್ಯದ ಆರ್ಥಿಕ ಸಂಪನ್ಮೂಲಗಳನ್ನಾಧರಿಸಿ ಖಾಲಿರುವ ಮತ್ತು ಖಾಲಿಯಾಗುವ ಶಿಕ್ಷಕರ ಹುದ್ದೆಗಳನ್ನು ಆದ್ಯತೆ ಮೇರೆಗೆ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದರು.