ಅಹಮದಾಬಾದ್ (ಗುಜರಾತ್): ಅಹಮದಾಬಾದ್ನ ಮೆಮ್ನಗರ ನಿಲ್ದಾಣದಲ್ಲಿ ಬಸ್ಗೆ ಬೆಂಕಿ ಹೊತ್ತಿಕೊಂಡಿದೆ. ಇದರಿಂದ ಎಚ್ಚೆತ್ತುಕೊಂಡ ಚಾಲಕ 25 ಪ್ರಯಾಣಿಕರನ್ನು ಸ್ಥಳಾಂತರಿಸುವ ಮೂಲಕ ಎಲ್ಲರ ಪ್ರಾಣವನ್ನು ಉಳಿಸಿದ್ದಾನೆ.
ಈ ವೇಳೆ ಘಟನಾ ಸ್ಥಳಕ್ಕೆ ಬಂದ ಅಗ್ನಿಶಾಮಕದಳದವರು ಕೆಲವೇ ನಿಮಿಷಗಳಲ್ಲಿ ಬೆಂಕಿಯನ್ನು ಹತೋಟಿಗೆ ತಂದರು.
#WATCH | Gujarat: Fire breaks out in a bus in Ahmedabad’s Memnagar station. All passengers were safe. The bus stop was immediately evacuated due to which no one was injured.
(Source: Ahmedabad Municipal Corporation) pic.twitter.com/0lWX0qeSMN
— ANI (@ANI) September 16, 2022
ಚಾಲಕನ ಪ್ರಕಾರ, ಎಂಜಿನ್ನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿದೆ. ಬಳಿಕ ಇಂಜಿನ್ನಿಂದ ಹೊಗೆ ಬರುತ್ತಿರುವುದನ್ನು ಕಂಡು ಮೆಮ್ನಗರ ಬಸ್ ನಿಲ್ದಾಣದಲ್ಲಿ ಬಸ್ ನಿಲ್ಲಿಸಿದೆ. ತಕ್ಷಣವೇ ನಾನು ಪ್ರಯಾಣಿಕರಿಗೆ ಎಚ್ಚರಿಕೆ ನೀಡಿದೆ. ಹೀಗಾಗಿ ಪ್ರಯಾಣಿಕರೆಲ್ಲರೂ ಬಸ್ನಿಂದ ಕೆಳಗಿಳಿದರು. ಎಲ್ಲ ಪ್ರಯಾಣಿಕರು ಬಸ್ನಿಂದ ಕೆಳಗಿಳಿದ ಕೂಡಲೇ ಬಸ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿತು. ಅಗ್ನಿಶಾಮಕ ದಳದ ಸಿಬ್ಬಂದಿ ಸರಿಯಾದ ಸಮಯಕ್ಕೆ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ ಎಂದರು.
BIG NEWS: ‘ಭಾರತ್ ಜುಡೋ ಯಾತ್ರೆ’ ವೇಳೆ ಅಂಗಡಿಯವರಿಗೆ ಹಣಕ್ಕೆ ಬೇಡಿಕೆ ಇಟ್ಟ ಆರೋಪ… ಮೂವರು ʻಕೈʼ ಕಾರ್ಯಕರ್ತರ ಅಮಾನತು