ಬೆಂಗಳೂರು : ಸರ್ಕಾರಿ ಜಮೀನುಗಳಲ್ಲಿ ಅನಧಿಕೃತವಾಗಿ ಸಾಗುವಳಿ ಮಾಡುತ್ತಿರುವ ಭೂರಹಿತರು ಮತ್ತು ಸಣ್ಣ ರೈತರ ಜಮೀನುಗಳ ಸಕ್ರಮಕ್ಕೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಒಂದು ವರ್ಷಗಳ ವಿಸ್ತರಣೆ ಮಾಡುವ ಮಹತ್ವದ ತೀರ್ಮಾನವನ್ನು ರಾಜ್ಯ ಸರ್ಕಾರ ತೆಗೆದುಕೊಂಡಿದೆ.
ಅಕ್ರಮ-ಸಕ್ರಮದ ಕುರಿತಂತೆ ಕಂದಾಯ ಇಲಾಖೆಯ ತಿದ್ದುಪಡಿ ವಿಧೇಯಕವನ್ನು ಇಂದು ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದ್ದು, 94 ಎ ತಿದ್ದುಪಡಿ ಮೂಲಕ ನಮೂನೆ 57 ರಲ್ಲಿ ಅರ್ಜಿ ಸಲ್ಲಿಸಿ ಸರ್ಕಾರಿ ಭೂಮಿಯಲ್ಲಿ ನಡೆಸುತ್ತಿರುವ ಅಕ್ರಮ ಸಾಗುವಳಿಯನ್ನು ಸಕ್ರಮಗೊಳಿಸಲು ಅವಕಾಶವಿದೆ. ಆದರೆ ಈ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಮತ್ತೆ ಒಂದು ವರ್ಷದ ಅವಧಿಗೆ ವಿಸ್ತರಣೆ ಮಾಡುವುದಕ್ಕೆ ಸರ್ಕಾರ ನಿರ್ಧರಿಸಿದೆ.
BIGG NEWS: ಬಿಎಸ್ ವೈ ವಿರುದ್ಧ ಸೂಕ್ತ ತನಿಖೆಯಾಗಲಿ; ಸತ್ಯಾಂಶ ಹೊರಬರಬೇಕು- ಸಂತೋಷ್ ಹೆಗ್ಡೆ