ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷಗಳಿಂದ ಇಂದು ವಿಧಾನಸಭೆಯಲ್ಲಿ ( Karnataka Assembly ) ಗದ್ಧಲ, ಕೋಲಾಹಲ ನಡೆಸಿದ ಕಾರಣ, ಕಲಾಪವನ್ನು ಸೋಮವಾರಕ್ಕೆ ಮುಂದೂಡಿಕೆ ಮಾಡಲಾಗಿದೆ.
ನಿನ್ನೆ ವಿಧಾನ ಪರಿಷತ್ ನಲ್ಲಿ ಮತಾಂತರ ನಿಷೇಧ ಕಾಯ್ದೆಗೆ ತೀವ್ರ ವಿರೋಧದ ನಡುವೆಯೂ ರಾಜ್ಯ ಸರ್ಕಾರದಿಂದ ಮಂಡಿಸಿ ಅನುಮೋದನೆ ಪಡೆಯಲಾಗಿತ್ತು. ಈ ವಿಚಾರವಾಗಿಯೇ ಇಂದು ವಿಧಾನಸಭೆ, ಪರಿಷತ್ ನಲ್ಲಿ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷಗಳಿಂದ ವಾಗ್ಧಾಳಿ ನಡೆಸಲಾಯಿತು.
ಓದುಗರೇ ಗಮನಿಸಿ: ಯಾವುದೇ ಸೈಬರ್ ವಂಚನೆಗೆ ಒಳಗಾಗಿದ್ದರೆ ತಕ್ಷಣ ಈ ನಂಬರ್ಗೆ ಕರೆ ಮಾಡಿ, ದೂರು ನೀಡಿ
ವಿಧಾನಸಭೆಯ ಕಲಾಪ ಆರಂಭಗೊಳ್ಳುತ್ತಿದ್ದಂತೇ, ಕಾಂಗ್ರೆಸ್ ಪಕ್ಷದಿಂದ ( Congress Party ) ಗದ್ದಲ ಕೋಲಾಹಲ ನಡೆಸಲಾಯಿತು. ಈ ಹಿನ್ನಲೆಯಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗ್ಡೆ ಕಾಗೇರಿಯವರು ( Speaker Vishweshwara Hegde Kageri ) ಸೋಮವಾರ ಬೆಳಿಗ್ಗೆ 11 ಗಂಟೆಗೆ ಮುಂದೂಡಿಕೆ ಮಾಡಿದ್ದಾರೆ.