ನವದೆಹಲಿ : ಆನ್ಲೈನ್ ಗ್ಯಾಂಬ್ಲಿಂಗ್ ಗೇಮ್ಗಳ ನಿಷೇಧಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಆದೇಶ ರದ್ದು ಮಾಡಿದ ಹೈಕೋರ್ಟ್ ಆದೇಶ ಪ್ರಶ್ನಿಸಿ ಸಲ್ಲಿರುವ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್(Supreme Court) ಇಂದು ಆನ್ಲೈನ್ ಗೇಮಿಂಗ್ ಕಂಪನಿಗಳಿಗೆ ನೋಟಿಸ್(Notice) ಜಾರಿ ಮಾಡಿದೆ.
ಅಕ್ಟೋಬರ್ 10 ರಿಂದ ಡ್ರೀಮ್ ಇಲೆವೆನ್, ಪೇ ಟೀಂ ಫಸ್ಟ್, ಗೇಮ್ಜಿ ಆ್ಯಪ್ ಸೇರಿದಂತೆ ಹಲವು ಫ್ಯಾಂಟಸಿ ಗೇಮ್ ಆ್ಯಪ್ಗಳನ್ನು ಸ್ಥಗಿತಗೊಳಿಸಿತ್ತು. ಸರ್ಕಾರದ ಈ ಕ್ರಮವನ್ನು ಗೇಮಿಂಗ್ ಕಂಪನಿಗಳು ಹೈಕೋರ್ಟ್ನಲ್ಲಿ ಪ್ರಶ್ನಿಸಿದ್ದವು.
ಅರ್ಜಿ ವಿಚಾರಣೆ ನಡೆಸಿದ್ದ ಸಿಜೆ ರಿತುರಾಜ್ ಅವಸ್ತಿ, ನ್ಯಾ. ಕೃಷ್ಣ ದೀಕ್ಷಿತ್ರಪೀಠ ಆನ್ಲೈನ್ ಗೇಮ್ಗೆ ಗ್ರೀನ್ ಸಿಗ್ನಲ್ ನೀಡಿತ್ತು. ಹೈಕೋರ್ಟ್ (High Court) ಆದೇಶವನ್ನು ಪ್ರಶ್ನೆ ಮಾಡಿ ಈಗ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ಇಂದು ವಿಚಾರಣೆ ನಡೆಸಿದ ಕೋರ್ಟ್ ನೋಟಿಸ್ ಜಾರಿ ಮಾಡಿದೆ.