ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದಂದು (ಸೆಪ್ಟೆಂಬರ್ 17) ಭಾರತೀಯ ಜನತಾ ಪಕ್ಷದ (ಬಿಜೆಪಿ) ತಮಿಳುನಾಡು ಘಟಕ ನವಜಾತ ಶಿಶುಗಳಿಗೆ ಚಿನ್ನದ ಉಂಗುರಗಳನ್ನು ಉಡುಗೊರೆಯಾಗಿ ನೀಡಲಿದೆ. ಇದಲ್ಲದೆ, ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ ಅಡಿಯಲ್ಲಿ 720 ಕೆಜಿ ಮೀನುಗಳನ್ನು ನೀಡುವುದನ್ನು
ಸಹ ಆಯೋಜಿಸಲಾಗಿದೆ. ಈ ಬಗ್ಗೆ ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ, ಹೈನುಗಾರಿಕೆ ಮತ್ತು ವಾರ್ತಾ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ಡಾ.ಎಲ್.ಮುರುಗನ್ ಮಾಹಿತಿ ನೀಡಿದ್ದಾರೆ.
ಈ ನಡುವೆ ಉತ್ತರ ಪ್ರದೇಶದ ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಹಿನ್ನೆಲೆಯಲ್ಲಿ ಜನರು ಗಂಗಾ ಆರತಿ ಮಾಡುತ್ತಾರೆ ಎನ್ನಲಾಗಿದೆ.
#WATCH उत्तर प्रदेश: वाराणसी में प्रधानमंत्री नरेंद्र मोदी के जन्मदिन से पहले लोगों ने गंगा आरती की।
कल 17 सितंबर को प्रधानमंत्री नरेंद्र मोदी 72 साल के हो जाएंगे। pic.twitter.com/Nu1rXPIZ3k
— ANI_HindiNews (@AHindinews) September 16, 2022