ಮಂಡ್ಯ: ಜಿಲ್ಲೆಯಲ್ಲಿ ಮತ್ತೆ ಜೆಡಿಎಸ್ ಶಾಸಕ ಮತ್ತು ಸಂಸದೆ ಸುಮಲತಾ ನಡುವೆ ಮಾತಿನ ಚಕಮಕಿ ನಡೆದಿದೆ. ಅಭಿವೃದ್ಧಿ ವಿಚಾರವಾಗಿ ಜೆಡಿಎಸ್ ಶಾಸಕರ ವಿರುದ್ಧ ಸಂಸದೆ ಸುಮಲತಾ ಅವರು ವಾಗ್ದಾಳಿ ನಡೆಸಿದ್ದಾರೆ.
BREAKING NEWS: ಬೆಂಗಳೂರು ಹೊರವಲಯದಲ್ಲಿ ರೇವ್ ಪಾರ್ಟಿ; ಪ್ರಭಾವಿ ರಾಜಕಾರಣಿಗಳ ಮಕ್ಕಳು ಭಾಗಿ
ದಿಶಾ ಸಭೆ ನಿಗದಿ ವಿಚಾರವಾಗಿ ಮಾತನಾಡಿದ ಅವರು, 3 ವರ್ಷಗಳಲ್ಲಿ ನಡೆದ ದಿಶಾ ಸಭೆಗೆ ಎಷ್ಟು ಬಾರಿ ಶಾಸಕರು ಹಾಜರಾಗಿದ್ದಾರೆ. 2 ವರ್ಷಗಳಲ್ಲಿ ಒಂದೇ ಒಂದು ಸಭೆಗೆ ಜೆಡಿಎಸ್ ಶಾಸಕರು ಬಂದಿಲ್ಲ ಎಂದು ಕಿಡಿಕಾರಿದ್ದಾರೆ.
ಇನ್ನು ಅಕ್ರಮ ಗಣಿಗಾರಿಕೆ ವಿರುದ್ಧ ನಾನು ನಿಂತಾಗ ಎಲ್ಲರೂ ಸಭೆಗೆ ಹಾಜರಾಗಿದ್ದರು.ಕೆಲವೊಮ್ಮೆ ಅಧಿವೇಶನ ಸಂದರ್ಭದಲ್ಲೂ ಸಭೆ ನಡೆಸಬೇಕಾಗುತ್ತದೆ. ಈಗ ಹೆಚ್ಚು ಮಳೆಯಾಗಿ ರಸ್ತೆ, ಮನೆ, ಬೆಳೆ ಹಾನಿಯಾಗಿದೆ. ಹಾಗಾಗಿ ತುರ್ತು ಸಭೆ ನಡೆಸಿ ಜನರಿಗೆ ಪರಿಹಾರ ಕೊಡಿಸುವ ಕೆಲಸ ಮಾಡಬೇಕು. ಅದು ಬಿಟ್ಟು ರಾಜಕಾರಣ ಮಾಡೋದಕ್ಕೆ ಆಗುತ್ತಾ.? ಎಂದು ಪ್ರಶ್ನಿಸಿದ್ದಾರೆ.