ರಾಮನಗರ: ಡಿ.ಕೆ ಶಿವಕುಮಾರ್ ಗೆ ಇಡಿ ನೋಟಿಸ್ ವಿಚಾರವಾಗಿ ಸಂಸದ ಡಿ.ಕೆ. ಸುರೇಶ್ ಪ್ರತಿಕ್ರಯೆ ನೀಡಿದ್ದಾರೆ. ಡಿ.ಕೆ ಶಿವಕುಮಾರ್ಗೆ ಕಳುಹಿಸಿರುವುದು ಇಡಿ ನೋಟಿಸ್ ಅಲ್ಲ, ಬಿಜೆಪಿ ಬೆದರಿಕೆ ಪತ್ರ, ಬಿಜೆಪಿ ಬೆದರಿಕೆ ಪತ್ರಕ್ಕೆ ಡಿ.ಕೆ. ಶಿವಕುಮಾರ್ ಆಗಲಿ ಕಾಂಗ್ರೆಸ್ ಆಗಲಿ ಹೆದರುವ ಪ್ರಶ್ನೆಯೇ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, ಬಿಜೆಪಿ ಅವರು ಡಿಕೆಶಿ ಮೇಲೆ ಆಗಾಗ ಇಂತಹ ಪ್ರಯತ್ನಗಳು ನಡೆಸುತ್ತಾರೆ. ಇದು ಇಡಿ ನೋಟಿಸ್ ಅಲ್ಲ, ಬಿಜೆಪಿ ಬೆದರಿಕೆ ಪತ್ರ. ಬಿಜೆಪಿ ಬೆದರಿಕೆ ಪತ್ರಕ್ಕೆ ಡಿ.ಕೆ. ಶಿವಕುಮಾರ್ ಆಗಲಿ ಕಾಂಗ್ರೆಸ್ ಆಗಲಿ ಹೆದರುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ. ಅವರು ಏನೇ ಮಾಡಿದರೂ ಅದನ್ನು ಎದುರಿಸಲು ಸಿದ್ಧರಾಗಿದ್ದೇವೆ ಡಿಕೆಶಿ ಅವರನ್ನು ಮಾನಸಿಕವಾಗಿ ಕುಗ್ಗಿಸುತ್ತಿದ್ದಾರೋ ದೈಹಿಕವಾಗಿ ಕುಗ್ಗಿಸುತ್ತಿದ್ದಾರೋ ಗೊತ್ತಿಲ್ಲ. ಆದರೆ ಇದು ಬಿಜೆಪಿ ಪಕ್ಷದ ನೋಟಿಸ್ ಅಷ್ಟೇ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.