ಬೆಂಗಳೂರು : ರಾಜ್ಯದ 3,854 ಗ್ರಾಮ ವಿದ್ಯುತ್ ಪ್ರತಿನಿಧಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಗ್ರಾಮ ವಿದ್ಯುತ್ ಪ್ರತಿನಿಧಿಗಳ ಸೇವೆ ಕಾಯಂ ಮಾಡಲಾಗುವುದು ಎಂದು ಇಂಧನ ಸಚಿವ ಸುನೀಲ್ ಕುಮಾರ್ ಹೇಳಿದ್ದಾರೆ.
BIG NEWS : Johnson & Johnson’s ಬೇಬಿ ಪೌಡರ್ ತಯಾರಿಕಾ ಪರವಾನಗಿ ರದ್ದುಗೊಳಿಸಿದ ಮಹಾರಾಷ್ಟ್ರ…?
ವಿಧಾನಸಭೆಯಲ್ಲಿ ಈ ಕುರಿತು ಮಾಹಿತಿ ನೀಡಿದ ಸಚಿವರು, ರಾಜ್ಯದಲ್ಲಿ 2004 ರಿಂದ ಗ್ರಾಮ ವಿದ್ಯುತ್ ಸಹಾಯಕರಾಗಿ ಕೆಲಸ ಮಾಡುತ್ತಿರುವ 3,854 ಮಂದಿ ಗ್ರಾಮ ವಿದ್ಯುತ್ ಪ್ರತಿನಿಧಿಗಳ ಸೇವೆ ಕಾಯಂಗೊಳಿಸುವ ಸಂಬಂಧ ಶೀಘ್ರವೇ ಸಿಎಂ ಬಸವರಾಜ ಬೊಮ್ಮಾಯಿ ಜೊತೆಗೆ ಸಮಾಲೋಚಿಸಿ, ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
BIGG NEWS : ಕರ್ನಾಟಕ ಬಯಲಾಟ ಅಕಾಡೆಮಿ ವಿವಿಧ ಪ್ರಶಸ್ತಿ ಪ್ರಕಟ : ಇಲ್ಲಿದೆ ಸಂಪೂರ್ಣ ಪಟ್ಟಿ
ಗ್ರಾಮ ವಿದ್ಯುತ್ ಪ್ರತಿನಿಧಿಗಳ ವೇತನವನ್ನು 12 ಸಾವಿರ ರೂ.ಗಳಿಂದ 16,320 ರೂ.ಗಳಿಗೆ ಹೆಚ್ಚಳ ಮಾಡಲಾಗಿದ್ದು, ಜೊತೆಗೆ ಮಾಸಿಕ 4 ಸಾವಿರ ರೂ. ಹೆಚ್ಚುವರಿ ಪ್ರೋತ್ಸಾಹಧನ ಹಾಗೂ 2 ಜೊತೆ ಸಮವಸ್ತ್ರ ವೆಚ್ಚ ಭರಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.