ನವದೆಹಲಿ: ಇಂದು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ 72 ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಮೋದಿ ಅವರಿಗಾಗಿ ಬಿಜೆಪಿ ಪಕ್ಷವು ಹಲವಾರು ಕಾರ್ಯಕ್ರಮಗಳನ್ನು ಯೋಜಿಸಿದೆ.
ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನವನದಕ್ಕೆ ಹೊಸ 8 ಚಿರತೆಗಳನ್ನು ಬಿಡುವುದರಿಂದ ಹಿಡಿದು ಪ್ರಮುಖ ಭಾಷಣ ಮಾಡುವವರೆಗೆ ವಿವಿಧ ಕಾರ್ಯಕ್ರಮಗಳನ್ನು ಯೋಜಿಸಲಾಗಿದೆ.
ಇದೇ ಸಮಯದಲ್ಲಿ, ಪ್ರಧಾನಿ ಮೋದಿಯವರ ಜನ್ಮದಿನವನ್ನು ಐತಿಹಾಸಿಕವಾಗಿಸಲು ಬಿಜೆಪಿ ಕೂಡ ಅನೇಕ ಯೋಜನೆಗಳನ್ನು ಹೊಂದಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ನವದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜೀವನ ಮತ್ತು ನಾಯಕತ್ವದ ಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ. ಅಷ್ಟೇ ಅಲ್ಲದೇ, ಅವರು “ಸೇವಾ ಪಖ್ವಾರ” ಎಂದು ಆಚರಿಸಲು ಪಕ್ಷದ ಎಲ್ಲಾ ಕಾರ್ಯಕರ್ತರು ಮತ್ತು ಮುಖಂಡರಿಗೆ ಸೂಚನೆ ನೀಡಿದ್ದಾರೆ.
ಇತರ ರಾಜ್ಯಗಳಲ್ಲಿಯೂ ಇದೇ ರೀತಿಯ ಪ್ರದರ್ಶನಗಳು ನಡೆಯಲಿವೆ. ಪಕ್ಷದ ಪ್ರಧಾನ ಕಾರ್ಯದರ್ಶಿ ಮತ್ತು ಸಂಸದ ಅರುಣ್ ಸಿಂಗ್ ಅವರು ಈ ಘೋಷಣೆಗಳನ್ನು ಮಾಡಿದ್ದು, ಇಂದಿನಿಂದ ಅಕ್ಟೋಬರ್ 2 ರವರೆಗೆ ಪಕ್ಷವು ಸಂಭ್ರಮಾಚರಣೆ ನಡೆಸಲಿದೆ ಎಂದು ತಿಳಿಸಿದ್ದಾರೆ.
“ಪ್ರಧಾನಿ ಮೋದಿಯವರ ಜೀವನ ಮತ್ತು ನಾಯಕತ್ವದ ಕುರಿತು ದೇಶಾದ್ಯಂತ ಪ್ರದರ್ಶನಗಳು ನಡೆಯಲಿವೆ. ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಅವರು ಬಿಜೆಪಿ ಪ್ರಧಾನ ಕಚೇರಿಯಲ್ಲಿ ಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ ಮತ್ತು ಇತರ ರಾಜ್ಯಗಳಲ್ಲಿಯೂ ಇದೇ ರೀತಿಯ ಪ್ರದರ್ಶನ ಇರುತ್ತದೆ” ಎಂದು ಅವರು ಮಾಧ್ಯಮಗಳನ್ನು ಉದ್ದೇಶಿಸಿ ಹೇಳಿದರು.
BIGG NEWS : `ಗ್ರಾಮ ವಿದ್ಯುತ್ ಪ್ರತಿನಿಧಿ’ಗಳಿಗೆ ಗುಡ್ ನ್ಯೂಸ್ : ಶೀಘ್ರವೇ ಸೇವೆ ಕಾಯಂ
BREAKING NEWS: SCO ಶೃಂಗಸಭೆ ನಂತ್ರ ಭಾರತಕ್ಕೆ ಆಗಮಿಸಿದ ಪ್ರಧಾನಿ ಮೋದಿ | PM Modi arrives to India
BIGG NEWS : `ಗ್ರಾಮ ವಿದ್ಯುತ್ ಪ್ರತಿನಿಧಿ’ಗಳಿಗೆ ಗುಡ್ ನ್ಯೂಸ್ : ಶೀಘ್ರವೇ ಸೇವೆ ಕಾಯಂ