ಬೆಂಗಳೂರು : ಇಂದು ಪ್ರಧಾನಿ ನರೇಂದ್ರ ದಾಮೋದರದಾಸ್ ಮೋದಿ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಪ್ರಧಾನಿ ಮೋದಿ 72ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಹುಟ್ಟುಹಬ್ಬಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಶುಭಕೋರಿದ್ದಾರೆ.
BIGG NEWS : ಮಾಜಿ ಸಿಎಂ `BSY’ ಗೆ ಮತ್ತೊಂದು ಶಾಕ್ : ಕರ್ನಾಟಕ ಲೋಕಾಯುಕ್ತ ಪೊಲೀಸರಿಂದ `FIR’
ಟ್ವಿಟರ್ ನಲ್ಲಿ ಪ್ರಧಾನಿ ಮೋದಿಗೆ ಸಿಎಂ ಬಸವರಾಜ ಬೊಮ್ಮಾಯಿ ಹುಟ್ಟುಹಬ್ಬದ ಶುಭಾಶಯ ಕೋರಿದ್ದು, ನಮ್ಮ ರಾಷ್ಟ್ರವನ್ನು ಸುರಕ್ಷಿತ, ಸಮೃದ್ಧ ಮತ್ತು ಘನತೆಯ ರಾಷ್ಟ್ರವನ್ನಾಗಿ ಮಾರ್ಪಡಿಸುವಲ್ಲಿ, ಹಾಗೂ ವಿಶ್ವದಲ್ಲಿಯೇ ಭಾರತಕ್ಕೆ ವಿಶೇಷವಾದ ಗೌರವ ಲಭಿಸಲು ಮಹತ್ತರ ಪಾತ್ರ ವಹಿಸಿರುವ ಭಾರತದ ಆದರ್ಶನಾಯಕರಾದ ಪ್ರಧಾನ ಮಂತ್ರಿ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು ಎಂದು ತಿಳಿಸಿದ್ದಾರೆ.
ನಮ್ಮ ರಾಷ್ಟ್ರವನ್ನು ಸುರಕ್ಷಿತ, ಸಮೃದ್ಧ ಮತ್ತು ಘನತೆಯ ರಾಷ್ಟ್ರವನ್ನಾಗಿ ಮಾರ್ಪಡಿಸುವಲ್ಲಿ, ಹಾಗೂ ವಿಶ್ವದಲ್ಲಿಯೇ ಭಾರತಕ್ಕೆ ವಿಶೇಷವಾದ ಗೌರವ ಲಭಿಸಲು ಮಹತ್ತರ ಪಾತ್ರ ವಹಿಸಿರುವ ಭಾರತದ ಆದರ್ಶನಾಯಕರಾದ ಪ್ರಧಾನ ಮಂತ್ರಿ ಶ್ರೀ @narendramodi ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.#HappyBdayModiJi pic.twitter.com/4ywZufWJwm
— Basavaraj S Bommai (@BSBommai) September 17, 2022