ಹುಬ್ಬಳ್ಳಿ: ಇಂದು ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬದ ಸಂಭ್ರಮ. ಹೀಗಾಗಿ ಕೇಂದ್ರ ಗಣಿ ಸಚಿವ ಪ್ರಹ್ಲಾದ್ ಜೋಶಿ ಪ್ರಧಾನಿ ಮೋದಿ ಜನ್ಮದಿನಕ್ಕೆ ಶುಭಕೋರಿದ್ದಾರೆ. ಪ್ರಧಾನಿ ಮೋದಿ ದೇಶ ಕಂಡ ಅಪ್ರತಿಮ ರಾಜಕಾರಣಿ . ದೇಶದ ವ್ಯವಸ್ಥೆಯಲ್ಲಿ ಅಮೂಲಾಗ್ರ ಬದಲಾವಣೆ ತಂದಿದ್ದಾರೆ ಎಂದು ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಮೋದಿಯವರು ಸ್ವಚ್ಛ, ಸುಸ್ಥಿರ ಸಮರ್ಥ ಆಡಳಿತ ಕೊಟ್ಟವರು. ಏಕಕಾಲಕ್ಕೆ ಕಠೋರ ನಿರ್ಣಯಗಳನ್ನು ತೆಗೆದುಕೊಂಡವರು. ರಾಜಕೀಯವಾಗಿ ನಮ್ಮ ಹಿತಕ್ಕೆ ಇಲ್ಲದಾಗಲೂ ದಿಟ್ಟ ನಿರ್ಧಾರ ಕೈಗೊಂಡಿದ್ದಾರೆ. ಪ್ರಧಾನಿ ಮೋದಿ ಭ್ರಷ್ಟಾಚಾರರಹಿತ ಆಡಳಿತ ಕೊಟ್ಟವರು ಎಂದರು.
ಇನ್ನು ಮೋದಿ ಹುಟ್ಟುಹಬ್ಬದಂದು ಅನೇಕರು ಕಾರ್ಯಕ್ರಮ ಮಾಡುತ್ತಿದ್ದಾರೆ. ಜನನಾಯಕರನ್ನು ಸ್ವೀಕಾರ ಮಾಡ್ತಿರುವುದಕ್ಕೆ ಇದು ಉದಾಹರಣೆಯಾಗಿದೆ. ಜನರು ಹೇಗೆ ಸ್ವೀಕಾರ ಮಾಡ್ತಾರೆ ಎಂಬುದಕ್ಕೆ ಇದೆ ಉದಾಹರಣೆಯಾಗಿದೆ. ಹೀಗಾಗಿ ಕರ್ನಾಟಕದ ಪರವಾಗಿ ಪ್ರಧಾನಿ ಮೋದಿಯವರಿಗೆ ಅಭಿನಂದನೆ ಸಲ್ಲಿಸುತ್ತೇನೆ . ನೂರು ವರ್ಷಕ್ಕೂ ಹೆಚ್ಚು ಕಾಲ ಮೋದಿಯವರು ಬಾಳಲಿ. ದೇಶಕ್ಕೆ ನೇತೃತ್ವ ಕೊಡಲಿ ಎಂದು ಪ್ರಹ್ಲಾದ್ ಜೋಶಿ ಅವರು ಹಾರೈಸಿದ್ದಾರೆ.