ಚಿತ್ರದುರ್ಗ: ಮುರುಘಾ ಮಠದ ಶ್ರೀಗಳು ಲೈಂಗಿಕ ಕಿರುಕುಳ ಆರೋಪದ ಮೇಲೆ ಜೈಲುಪಾಲಾಗಿದ್ದಾರೆ. ಈ ಬಗ್ಗೆ ಬಸನಗೌಡ ಯತ್ನಾಳ್ ಹೈಕೋರ್ಟ್ ನ್ಯಾಯಮೂರ್ತಿಗೆ ಪತ್ರ ಬರೆದಿದ್ದಾರೆ.
ಮುರುಘಾ ಶರಣರು ಪೀಠ ತ್ಯಜೆಸಬೇಕೆಂದು ನಿರ್ದೇಶನ ನೀಡುವಂತೆ ಹೈಕೋರ್ಟ್ ನ್ಯಾಯಮೂರ್ತಿ, ಸಿಎಸ್ ಗೆ ಯತ್ನಾಳ್ ಪತ್ರ ಬರೆದಿದ್ದಾರೆ. ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ಯತ್ನಾಳ್ ಪತ್ರ ಬರೆದಿದ್ದಾರೆ. ಸ್ವಾಮೀಜಿ ಪೀಠತ್ಯಾಗ ಮಾಡಲು ನಿರ್ದೇಶಿಸಬೇಕು. ತಾತ್ಕಾಲಿಕ ಮೇಲುವಾಸ್ತುವಾರಿ ಸಮತಿ ರಚಿಸಬೇಕೆಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ನಿ. ನ್ಯಾಯಾಮೂರ್ತಿಗಳ ನೇತೃತ್ವದಲ್ಲಿ ಸಮಿತಿ ರಚನೆಗೆ ಮನವಿ ಮಾಡಲಾಗಿದೆ.