ಕೋಲಾರ:ಶಿಡ್ಲಘಟ್ಟ ಕ್ಷೇತ್ರ ಶಿಕ್ಷಣಾಧಿಕಾರಿಗಳು (ಬಿಇಒ) ಎಸ್ಸಿ/ಎಸ್ಟಿ ವಿದ್ಯಾರ್ಥಿಗಳಿಗೆ ವೈದಿಕ ಗಣಿತ ಪರಿಚಯಿಸುವ ಕುರಿತು ಹೊರಡಿಸಿದ್ದ ವಿವಾದಾತ್ಮಕ ಕಚೇರಿ ಮೆಮೊವನ್ನು ಹಿಂಪಡೆಯಲಾಗಿದೆ. ಶಿಡ್ಲಘಟ್ಟ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗೆ ಪತ್ರ ಬರೆದಿರುವ ಬಿಇಒ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಮುಂದಿನ ಆದೇಶದವರೆಗೆ ವೈದಿಕ ಗಣಿತ ತರಬೇತಿ ಕಾರ್ಯಕ್ರಮವನ್ನು ಹಿಂತೆಗೆದುಕೊಳ್ಳಲಾಗುತ್ತದೆ ಅಂತ ತಿಳಿಸಿದ್ದಾರೆ.
BIGG NEWS: ನಾಳೆಯಿಂದ ಮತ್ತೆ ಬೆಂಗಳೂರಿನಲ್ಲಿ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ
ಗ್ರಾಮ ಪಂಚಾಯತಿಗಳಲ್ಲಿನ ಪರಿಶಿಷ್ಟರಿಗೆ ಮೀಸಲಾದ ಶೇ 25ರ ಅನುದಾನ ಬಳಸಿಕೊಂಡು ರಾಜ್ಯದ ವಿವಿಧ ಶಾಲೆಗಳ 5ರಿಂದ 8ನೇ ತರಗತಿವರೆಗಿನ ಮಕ್ಕಳಿಗೆ ವೇದಗಣಿತ ಕಲಿಸಲು ಹಾಗೂ ಅದಕ್ಕೆ ಅಗತ್ಯವಾದ ಸಮವಸ್ತ್ರ ಒದಗಿಸಲು ಗ್ರಾಮೀಣಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ. ಈ ಮೂಲಕ ಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮಕ್ಕಳಿಗೂ ವೇದಗಣಿತ ಕಲಿಕೆಗೆ ಅವಕಾಶ ಮಾಡಿಕೊಡಲು ಶಿಕ್ಷಣ ಇಲಾಖೆ ಕ್ರಮ ಕೈಗೊಂಡಿದೆ.