ವಿಜಯಪುರ : ವಿಜಯಪುರ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಅಪರಿಚಿತ ವಾಹನ ಡಿಕ್ಕಿಯಾಗಿ ಮೂವರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಸಾರವಾಡ ಗ್ರಾಮದಲ್ಲಿ ತಡರಾತ್ರಿ ಅಪಘಾತ ಸಂಭವಿಸಿದೆ. ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಅಪರಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಮೂವರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ತಿಗಣಿ ಬಿದರಿ ಗ್ರಾಮದ ಸಂತೋಷ್ (25), ಈಶ್ವರ್ ಶಿಂಧೆ (26) ಹಾಗೂ ಸಾರವಾಡ ಗ್ರಾಮದ ಜಗದೀಶ್ ಲಕಡಿ (28) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಬಬಲೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.