ಶಿವಮೊಗ್ಗ: ಜಿಲ್ಲೆಯಲ್ಲಿ ವೃದ್ಧೆಯೊಬ್ಬರ ಹೊಟ್ಟೆಯಲ್ಲಿದ್ದ 4 ಕೆ.ಜಿ ತೂಕದ ಗೆಡ್ಡೆಯನ್ನು ವೈದ್ಯರ ತಂಡ ಯಶಸ್ವಿಯಾಗಿ ಹೊರಗೆ ತೆಗೆದಿದೆ. ಜಯ ಚಾಮರಾಜೇಂದ್ರ ತಾಲೂಕು ಆಸ್ಪತ್ರೆಯ ವೈದ್ಯರಾದ ಡಾ.ರಂಗಸ್ವಾಮಿ, ಡಾ. ಸುಮ ಹಾಗೂ ಇತರರ ತಂಡ ಶಸ್ತ್ರಚಿಕಿತ್ಸೆ ನಡೆಸಿದೆ.
BIGG NEWS: ಕರ್ನಾಟಕದಲ್ಲಿ ಕೆಂಪು ಬಾವುಟ ಹಾರಿಸಲಿದ್ದಾರೆ ಕೇರಳ ಸಿಎಂ ಪಿಣರಾಯಿ ವಿಜಯನ್
ಭದ್ರಾವತಿ ತಾಲೂಕಿನ ಅಂತರಗಂಗೆ ನಿವಾಸಿ 65 ಶಾರದಮ್ಮ ಎಂಬುವರು ಬಹು ದಿನಗಳಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದರು. ನಂತರ ಸ್ಥಳೀಯ ವೈದ್ಯರ ಬಳಿ ತೋರಿಸಿದಾಗ ಅವರ ಹೊಟ್ಟೆಯಲ್ಲಿ ಗೆಡ್ಡೆ ಇರುವುದನ್ನು ಖಚಿತಪಡಿಸಿದ್ದಾರೆ.
BIGG NEWS: ಕರ್ನಾಟಕದಲ್ಲಿ ಕೆಂಪು ಬಾವುಟ ಹಾರಿಸಲಿದ್ದಾರೆ ಕೇರಳ ಸಿಎಂ ಪಿಣರಾಯಿ ವಿಜಯನ್
ಶಾರದಮ್ಮ ಅವರಿಗೆ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರಾದ ರಂಗಸ್ವಾಮಿ ಹಿಂದೆ ಭದ್ರಾವತಿ ತಾಲೂಕು ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸಿದ್ದರು. ಇದರಿಂದ ಶಾರದಮ್ಮ ಡಾ.ರಂಗಸ್ವಾಮಿ ಅವರ ಮೇಲೆ ವಿಶ್ವಾಸವಿಟ್ಟು ಅವರ ಬಳಿಯೇ ತೆರಳಿ ಆಪರೇಷನ್ ಮಾಡಿಸಿಕೊಂಡಿದ್ದಾರೆ. ಸದ್ಯಕ್ಕೆ ವೃದ್ಧೆ ಆರೋಗ್ಯವಾಗಿದ್ದು, ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರಿಗೆ ಶಾರದಮ್ಮ ಧನ್ಯವಾದ ಅರ್ಪಿಸಿದ್ದಾರೆ.