ಬೆಳಗಾವಿ : ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕದಲ್ಲಿ ಮತ್ತೆ ಭೀಮಾ, ಮಲಪ್ರಭಾ ನದಿಗಳು ಉಕ್ಕಿ ಹರಿಯುತ್ತಿವೆ. ಪ್ರವಾವ ಭೀತಿ ಎದುರಾಗಿದೆ.
ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಪ್ರವಾಹ ಭೀತಿ ಎದುರಾಗಿದ್ದು, ಮಹಾರಾಷ್ಟ್ರದಲ್ಲಿ ಭಾರೀ ಮಳೆಯಿಂದಾಗಿ ಭೀಮಾನದಿ ಉಕ್ಕಿ ಹರಿಯುತ್ತಿದ್ದು, ಮಹಾರಾಷ್ಟ್ರದ ಜಲಾಶಯಗಳಿಂದ ನೀರು ಬಿಡುಗಡೆ ಮಾಡಲಾಗಿದ್ದು, ಭೀಮಾ ನದಿಗೆ 1 ಲಕ್ಷ 16 ಸಾವಿರ ಕ್ಯೂಸೆಕ್ ನೀರು ರಿಲೀಸ್ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಯ ಬ್ರಿಡ್ಜ್ ಕಂ ಬ್ಯಾರೇಜ್ ಮುಳುಗಡೆಯಾಗಿದೆ.
BREAKING NEWS: ಚೀನಾದಲ್ಲಿ ಭೀಕರ ಅಪಘಾತ: ಬಸ್ ಪಲ್ಟಿಯಾಗಿ 27 ಮಂದಿ ಸಾವು, 20 ಜನರಿಗೆ ಗಾಯ
ವಿಜಯಪುರ ಜಿಲ್ಲೆಯ ಚಡಚಣ, ಇಂಡಿ, ಆಲಮೇಲ ತಾಲೂಕಿನಲ್ಲಿ ಭೀಮಾ ನದಿ ಉಕ್ಕಿ ಹರಿಯುತ್ತಿದ್ದು, ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಖಾನಪುರ-ಪಡನೂರು, ಶಿರನಾಳ ಸೇರಿದಂತೆ ಹಲವೆಡೆ ಸೇತುವೆಗಳು ಮುಳುಗಡೆಯಾಗಿದ್ದು, ಸಂಪರ್ಕ ಬಂದ್ ಆಗಿದೆ.
ಕಲಬುರಗಿ ಜಿಲ್ಲೆಯಲ್ಲೂ ಭೀಮಾ ನದಿಯ ಅಬ್ಬರ ಮುಂದುವರೆದಿದ್ದು, ಕಲಬುರಗಿ ಜಿಲ್ಲೆಯಲ್ಲಿ ಪ್ರವಾಹದ ಆತಂಕ ಎದುರಾಗಿದೆ. ಉಜಿನಿ ಜಲಾಶಯದಿಂದ ನೀರು ಬಿಟ್ಟ ಹಿನ್ನೆಲೆಯಲ್ಲಿ ಯಲ್ಲಮ್ಮ ದೇಗುಲ ಸಂಪೂರ್ಣ ಜಲಾವೃತಗೊಂಡಿವೆ.