ಬೀಜಿಂಗ್: ಚೀನಾದ ನೈಋತ್ಯ ಭಾಗದಲ್ಲಿ ಇಂದು ಬೆಳಗ್ಗೆ ಭೀಕರ ರಸ್ತೆ ಅಪಘಾತವಾಗಿದ್ದು, ಚೀನಾದ ಸ್ಯಾಂಡು ಕೌಂಟಿಯ ಎಕ್ಸ್ಪ್ರೆಸ್ವೇಯಲ್ಲಿ ಬಸ್ ಪಲ್ಟಿಯಾದ ಪರಿಣಾಮ ಅಪಘಾತದಲ್ಲಿ ಕನಿಷ್ಠ 27 ಜನರು ಸಾವನ್ನಪ್ಪಿದ್ದಾರೆ ಮತ್ತು ಇತರ 20 ಜನರು ಗಾಯಗೊಂಡಿದ್ದಾರೆ.
ಮಾಹಿತಿಯ ಪ್ರಕಾರ, ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬಸ್ಸಿನಲ್ಲಿ 47 ಜನರಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.