ಬೆಂಗಳೂರು: ಭ್ರಷ್ಟಾಚಾರ ಆರೋಪ ಕೇಸ್ನಲ್ಲಿ ಜನಪ್ರತಿ ನ್ಯಾಯಾಲವು ನೀಡಿರುವ ಆದೇಶವನ್ನು ಪ್ರಶ್ನೆ ಮಾಡಿ ಮಾಜಿ ಸಿಎಂ ಬಿಎಸ್ ಯಡಿಯ್ಯೂರಪ್ಪನವರು ಸುಪ್ರಿಂಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಅಂದ ಹಾಗೇ ಸೋಮವಾರ ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ ಮತ್ತು ನ್ಯಾ. ಹಿಮಾ ಕೊಹ್ಲಿ ಅವರ ಪೀಠ ನಡೆಸಲಿದೆ ಅಂತ ತಿಳಿದು ಬಂದಿದೆ.
ಪ್ರಕರಣದ ಹಿನ್ನಲೆ: ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಪಟ್ಟಂತೆ, ನ್ಯಾಯಾಲಯದ ನಿರ್ದೇಶನದಂತೆ ಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಅವರ ಪುತ್ರ ಬಿ.ವೈ ವಿಜಯೇಂದ್ರ ಹಾಗೂ ಮತ್ತಿತರರ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಸಂಬಂಧಿಸಿದ ಗುತ್ತಿಗೆ ನೀಡುವಾಗ ಭ್ರಷ್ಟಾಚಾರ ಆಗಿದೆ ಎಂದು ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು.
ಇದಕ್ಕೆ ಸಂಬಂಧಪಟ್ಟಂತೆ ರಾಜ್ಯಪಾಲರು ಪೂರ್ವಾನುಮತಿ ನೀಡದ ಕಾರಣ ದೂರು ವಜಾಗೊಳಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿತ್ತು. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಟಿ.ಜೆ.ಅಬ್ರಹಾಂ ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೇ ವೇಳೆ ಹೈಕೋರ್ಟ್ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹೈಕೋರ್ಟ್ ದೂರನ್ನ ಮರುಪರಿಶೀಲಿಸುವಂತೆ ಸೂಚನೆ ನೀಡಿತ್ತು, ಇದೇ ವೇಳೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತನಿಖೆ ನಡೆಸಿ ವರದಿ ನೀಡಲು ಲೋಕಾಯುಕ್ತಕ್ಕೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೂಚಿಸಿದೆ. ಈಹಿನ್ನಲೆಯಲ್ಲಿ ಬಿಎಸ್ ಯಡಿಯೂರಪ್ಪ ಮತ್ತು ಅವರ ಪುತ್ರ ವಿಜಯೇಂದ್ರ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ. .