ಬೆಳಗಾವಿ : ಶಾಲೆಗೆ ಅನಧಿಕೃತವಾಗಿ ಗೃರು ಹಾಜರಾಗುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರಿಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಖಡಕ್ ಎಚ್ಚರಿಕೆ ನೀಡಿದ್ದು, ಶಾಲೆಗೆ ಗೈರು ಹಾಜರಾದ ಶಿಕ್ಷಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಶಿಕ್ಷಕರು ಶಾಲಾ ಅವಧಿಯಲ್ಲಿ ತರಗತಿಗೆ ಗೈರಾಗಿ, ಖಾಸಗಿ ಕಾರ್ಯಕ್ರಮಕ್ಕೆ ಹಾಜರಾದರೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಇರುವ ಕರ್ನಾಟಕ ಪಬ್ಲಿಕ್ ಶಾಲೆ(ಕೆಪಿಎಸ್)ಗಳಿಗೆ ಆಂಗ್ಲ ಮಾಧ್ಯಮ ಶಿಕ್ಷಕರನ್ನು ನೇಮಿಸುವವರೆಗೆ ಹೊಸದಾಗಿ ಕೆಪಿಎಸ್ ಹಾಗೂ ಸರ್ಕಾರಿ ಇಂಗ್ಲಿಷ್ ಮಾಧ್ಯಮ ಶಾಲೆ ಆರಂಭಿಸುವುದಿಲ್ಲ ಎಂದು ತಿಳಿಸಿದ್ದಾರೆ.