ಬೆಂಗಳೂರು: ಎಸ್.ಟಿ ಸೋಮಶೇಖರ್ ವಿರುದ್ಧ FIR ದಾಖಲು ವಿಚಾರವಾಗಿ ವಿಧಾನಸೌಧದಲ್ಲಿ ಹೆಚ್ .ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಕೋರ್ಟ್ ಆದೇಶದ ಮೇರೆಗೆ ಎಫ್ ಐಆರ್ ದಾಖಲಾಗಿದೆ . ಸೋಮಶೇಖರ್ ಅಧ್ಯಕ್ಷತೆಯಲ್ಲಿ ನಿರ್ಧಾರ ಕೈಗೊಂಡ ಹಿನ್ನೆಲೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಸೋಮಶೇಖರ್ ಸತ್ಯಾಸತ್ಯತೆ ಮರೆಮಾಚಲು ಅವಕಾಶ ಇದೆ. ಹಾಗಾಗಿ ಸೋಮಶೇಖರ್ ರಾಜೀನಾಮೆ ನೀಡುವುದು ಸೂಕ್ತ ಎಂದು ಕುಮಾರಸ್ವಾಮಿ ಹೇಳಿದ್ದಾರೆ.