ಬೆಂಗಳೂರು : ಈ ವರ್ಷವೇ ಶಾಲಾ-ಕಾಲೇಜುಗಳಲ್ಲಿ ಭಗವದ್ಗೀತೆ ಬೋಧನೆ ವಿಚಾರದ ಕುರಿತಂತೆ ಚರ್ಚೆ ನಡೆಸಲಾಗುತ್ತಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
BIGG NEWS : `PSI’ ನೇಮಕಾತಿ ಹಗರಣ : ಚಾರ್ಜ್ ಶೀಟ್ ಬಳಿಕ ಮರು ಪರೀಕ್ಷೆ ದಿನಾಂಕ ಘೋಷಣೆ
ವಿಧಾನಪರಿಷತ್ ನಲ್ಲಿ ಇಂದು ಎಂಎಲ್ ಸಿ ಎಂ.ಕೆ. ಪ್ರಾಣೇಶ್ ಪ್ರಶ್ನೆಗೆ ಉತ್ತರಿಸಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ರಾಜ್ಯದ ಶಾಲಾ ಕಾಲೇಜುಗಳಲ್ಲಿ ಭಗವದ್ಗೀತೆ ಬೋಧಿಸುವ ಕುರಿತಂತೆ ಚರ್ಚೆ ನಡೆಯುತ್ತಿದೆ. ಈ ವರ್ಷವೇ ಭಗವದ್ಗೀತೆ ಬೋಧಿಸಬೇಕು ಎನ್ನುವ ಚರ್ಚೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ನೈತಿಕ ಶಿಕ್ಷಣ ವಿಭಾಗದಲ್ಲಿ ಭಗವದ್ಗೀತೆ ಬೋಧಿಸುವ ಕುರಿತು ಚರ್ಚೆ ನಡೆಸಲಾಗುತ್ತಿದ್ದು, ಈ ಬಗ್ಗೆ ಸಮಿತಿ ರಚನೆ ಮಾಡಿ ನಿರ್ಧಾರ ಮಾಡಲಾಗುತ್ತದೆ ಎಂದು ಸ್ಪಷ್ಟನೆ ನೀಡಿದ್ದಾರೆ.