ಬೆಂಗಳೂರು: ಕೆ.ಎಸ್ ಈಶ್ವರಪ್ಪ ಮತ್ತೆ ಸಂಪುಟ ಸೇರ್ಪಡೆ ವಿಚಾರವಾಗಿ ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಸೇರ್ಪಡೆ ವಿಚಾರಕೇಂದ್ರದ ನಾಯಕರಿಗೆ ಬಿಟ್ಟಿದ್ದು.ನನಗೆ ಸಚಿವ ಸ್ಥಾನ ನೀಡೋದು ವಿಳಂಬವಾಗಿದೆ ಎಂದು ಹೈಕಮಾಂಡ್ ವಿರುದ್ಧ ಈಸ್ವರಪ್ಪ ಅಸಮಾಧಾನ ವ್ಯಕ್ತಪಡಿಸದಿದ್ದಾರೆ.
JOBS ALEART: ಉದ್ಯೋಗಾಕಾಂಕ್ಷಿಗಳೇ ಗಮನಿಸಿ : 5008 ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ|SBI Recruitment 2022
ನಗರದಲ್ಲಿ ಮಾತನಾಡಿದ ಅವರು, ಗುತ್ತಿಗೆದಾರನ ಸಾವಿನ ಕೇಸ್ ನಲ್ಲಿ ನನಗೆ ಕ್ಲೀನ್ ಚಿಟ್ ಸಿಕ್ಕಿದೆ. ಆದರೆ ಸಚಿವ ಸ್ಥಾನ ಕೊಡೋದು ವಿಳಂಬ ಮಾಡುತ್ತಿದ್ದಾರೆ. ಇದರಿಂದ ನನಗೆ ಅಸಮಾಧಾನ ಆಗಿದೆ. ಹೀಗಾಗಿ ನಾನು ಸದನಕ್ಕೆ ಹೋಗ್ತಿಲ್ಲ. ಇದನ್ನು ಮುಚ್ಚುಮರೆ ಇಲ್ಲದೆ ಹೇಳ್ತಿನಿ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಇತ್ತ, ಡಿ.ಕೆ ಶಿವಕುಮಾರ್ ಕೆಲಸ ಮಾಡಿದವರಿಗೆ ಮಾತ್ರ ಟಿಕೆಟ್ ಎಂಬ ವಿಚಾರಕ್ಕೆ ಸಂಬಂಧಿಸಿ, ಡಿಕೆಶಿ ಸರ್ವಾಧಿಕಾರಿ ರೀತಿಯಲ್ಲಿ ವರ್ತಿಸುತ್ತಿದ್ದಾರೆ. ಇಷ್ಟು ದಿನ ಕೇಡಿ ಡಿಕೆಶಿ ಆಗಿದ್ರು. ಇದೀಗ ಸರ್ವಾಧಿಕಾರಿಯಾಗಲು ಹೊರಟಿದ್ದಾರೆ ಎಂದು ಡಿ.ಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.